ಕಾರ್ಕಳ : ಕಳೆದ ಮೇ 22 ರಂದು ಬೆಳ್ತಂಗಡಿಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಆಯೋಜಿಸಿದ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಮುಖ್ಯಮಂತ್ರಿ ಸಿದ್ದರಾಮಯ್ಯನವರು 24 ಹಿಂದೂಗಳ ಕೊಲೆ ಮಾಡಿದ್ದಾರೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.ಈ ಕುರಿತಂತೆ ಹರೀಶ್ ಪೂಂಜಾ ವಿರುದ್ಧ ಕಾರ್ಕಳ ಕಾಂಗ್ರೆಸ್ ನಿಯೋಗ ನಗರ ಪೊಲೀಸ್ ಠಾಣೆಗೆ ದೂರು ನೀಡಿದೆ.
ಮುಖ್ಯಮಂತ್ರಿಗಳ ವಿರುದ್ದ ಶಾಸಕ ಪೂಂಜಾ ಆಡಿದ ಮಾತುಗಳು ಸತ್ಯಕ್ಕೆ ದೂರವಾಗಿದೆ.ಅವರನ್ನು ವೈಯಕ್ತಿಕವಾಗಿ ನಿಂದಿಸಿ ಮಾನಹಾನಿ ಎಸಗಿರುವ ಮಾಡಿದ ಶಾಸಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾರ್ಕಳ ಕಾಂಗ್ರೆಸ್ ನಿಯೋಗ ದೂರು ನೀಡಿದೆ.
ಈ ಸಂದರ್ಭದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಪುರಸಭಾ ಸದಸ್ಯ ವಕ್ತಾರ ಶುಭದ ರಾವ್, ಪುರಸಭಾ ಸದಸ್ಯ ಸೋಮನಾಥ ನಾಯ್ಕ್,ಮಾಜಿ ಸದಸ್ಯ ವಿವೇಕಾನಂದ ಶೆಣೈ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕಾಂತಿ ಶೆಟ್ಟಿ, ಸುನೀಲ್ ಭಂಡಾರಿ, ಬ್ರಿಯಾನ್ ಪಾಯಸ್ ಮತ್ತಿತರರು ಉಪಸ್ಥಿತರಿದ್ದರು.