ಮಂಗಳೂರು : ತಾಲೂಕು ಮರಾಠಿ ಸಮಾಜ ಸೇವಾ ಸಂಘ (ರಿ) ಗಂಜಿಮಠ ಮಂಗಳೂರು ಇವರ ಆಶ್ರಯದಲ್ಲಿ ಮೂರನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ, ಮಹಾಸಭೆ, ನಿವೃತ್ತರಿಗೆ ಹಾಗೂ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮ ಮೇ.28 ರಂದು ಗಂಜಿಮಠ ಮರಾಠಿ ಸಮಾಜ ಮಂದಿರದಲ್ಲಿ ನಡೆಯಲಿದೆ.
ತಾಲೂಕಿನ ಮರಾಠಿ ಬಾಂಧವರಿಗಾಗಿ, ಶ್ರೀ ಸತ್ಯನಾರಾಯಣ ಪೂಜೆ,ಭಕ್ತಿಗಾನ ನಡೆಯಲಿದೆ.
ಮಹಾಸಭೆ, ನಿವೃತ್ತರಿಗೆ ಮತ್ತು ಸಾಧಕರಿಗೆ ಸನ್ಮಾನ,ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ 11 ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ,10ಜೋಡಿ ನವ ವಧುವರರಿಗೆ ಶುಭಾಶಯ, ನಾಲ್ವರಿಗೆ ವೈದ್ಯಕೀಯ ನೆರವು,
ಒಂದರಿಂದ ಹತ್ತನೇ ತರಗತಿಯ 152 ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದ್ದು, ಸಂಘದ ಅಧ್ಯಕ್ಷರಾದ ಶೇಖರ ಕಡ್ತಲ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಠ್ಠಲ ನಾಯಕ್ ಕಲ್ಲಡ್ಕ ದಿಕ್ಸೂಚಿ ಭಾಷಣ ಮಾಡಲಿದ್ದು, ಕರಾವಳಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿಸೋಜ, ಜಿಲ್ಲಾ ಸಂಘದ ಅಧ್ಯಕ್ಷ ರವಿಪ್ರಸಾದ್, ಶಿಕ್ಷಕ ಬಾಲಕೃಷ್ಣ ಮೂಲ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಎಂದು ಸಂಘದ ಪ್ರಕಟಣೆ ತಿಳಿಸಿದೆ.
ಈ ಎಲ್ಲಾ ಕಾರ್ಯಕ್ರಮಗಳಿಗೆ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ತಾಲೂಕು ಮರಾಠಿ ಸಮಾಜ ಸೇವಾ ಸಂಘದ ಪ್ರಕಟಣೆ ತಿಳಿಸಿದೆ.