ಬೆಂಗಳೂರು : ಘೋಷಣೆ ಮಾಡಿದಂತೆ ರಾಜ್ಯ ಸರ್ಕಾರ 200 ಯೂನಿಟ್ ಉಚಿತ ವಿದ್ಯುತ್ ಭರವಸೆ ಈಡೇರಿಸಲಿ, ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಜನರು ಪಟ್ಟು ಹಿಡಿದು ಕುಳಿತಿದ್ದಾರೆ.
ಈ ನಡುವೆ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಬೇಕೆಂದು ಮಹಿಳೆಯರು ಗಲಾಟೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಸ್ ನಲ್ಲಿ ಟಿಕೆಟ್ ಮಾಡಿಸದೇ ಮಹಿಳೆಯರು ನಿರ್ವಾಹಕರ ಜೊತೆ ಗಲಾಟೆ ಮಾಡುತ್ತಿದ್ದಾರೆ. ಇದರಿಂದ ಸಿಬ್ಬಂದಿಗೆ ತೊಂದರೆ ಕಿರಿಕಿರಿ ಆಗುತ್ತಿದೆ. ಇದಕ್ಕೆ ಶೀಘ್ರ ಪರಿಹಾರ ಕೊಡಿ ಎಂದು ಸಿಎಂ ಸಿದ್ದರಾಮಯ್ಯಗೆ ಸಾರಿಗೆ ಯೂನಿಯನ್ ವತಿಯಿಂದ ಪತ್ರ ಬರೆಯಲಾಗಿದೆ.
ಬಸ್ ನಲ್ಲಿ ಮಹಿಳೆಯರು ಹಣ ನೀಡಲು ನಿರಾಕರಿಸುತ್ತಿದ್ದಾರೆ. ಹಣ ನೀಡುವಂತೆ ಕೇಳಿದ್ರೆ ಗಲಾಟೆ ಮಾಡುತ್ತಾರೆ. ಇದರಿಂದ ನಮ್ಮ ಸಿಬ್ಬಂದಿ ಟಿಕೆಟ್ ಪಡೆಯುವುದೇ ಕಷ್ಟವಾಗಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯನವರು ಶೀಘ್ರ ಉಚಿತ ಪ್ರಯಾಣ ಯೋಜನೆಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಗೆ ತರಲಾಗುತ್ತದೆ ಎಂದು ಕಾಂಗ್ರೆಸ್ ಚುನಾವಣೆ ವೇಳೆ ಘೋಷಣೆ ಮಾಡಿತ್ತು.