ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಹೋಟೆಲ್ ಗೆ ತೆರಳಿದ್ದ ಮುಸ್ಲಿಂ ಯುವತಿ ಹಾಗೂ ಹಿಂದೂ ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ವರದಿಯಾಗಿದೆ.
ಚಿಕ್ಕಬಳ್ಳಾಪುರ ನಗರದ ಗೋಪಿಕಾ ಚಾಟ್ಸ್ ಬಳಿ ನಿನ್ನೆ ಈ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಸ್ಲಿಂ ಯುವತಿ ಹಾಗೂ ಹಿಂದೂ ಯುವಕ ಹೋಟೆಲ್ ಗೆ ಒಟ್ಟಾಗಿ ಬಂದಿದ್ದಾರೆ. ನಂತರ ವಾರ್ನ್ ಮಾಡಿ ಹೋದ ಪುಂಡರು ನಂತರ ಹೊರಬಂದ ಜೋಡಿಯ ಜೊತೆ ಗಲಾಟೆ ಮಾಡಿದ್ದಾರೆ. ಮುಸ್ಲಿಂ ಆಗಿ ಹಿಂದೂ ಯುವಕನ ಜೊತೆ ಹೋಗುತ್ತೀಯಾ ಎಂದು ಯುವತಿಯನ್ನು ಪ್ರಶ್ಮಿಸಿದ್ದಾರೆ. ಅಲ್ಲದೇ ಹಿಂದೂ ಯುವಕನನನ್ನು ಎಳೆದಾಡಿ ಆತನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ನೈತಿಕ ಪೊಲೀಸ್ ಗಿರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದ ಬೆನ್ನಲ್ಲೇ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಘಟನೆ ಬಗ್ಗೆ ಪೊಲೀಸರು ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುವುದನ್ನು ಕಾದು ನೋಡಬೇಕಾಗಿದೆ.