ನವದೆಹಲಿ: ಭಾರತದ ನೂತನ ಸಂಸತ್ ಕಟ್ಟಡದ ಲೋಕಾರ್ಪಣೆಯ ಸವಿನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಅಂಚೆ ಚೀಟಿ ಮತ್ತು 75 ರೂಪಾಯಿ ಮುಖಬೆಲೆಯ ನಾಣ್ಯವನ್ನು ಬಿಡುಗಡೆಗೊಳಿಸಿದರು
ಭಾನುವಾರ ಮುಂಜಾನೆ ಹೊಸ ಸಂಸತ್ ಸಂಕೀರ್ಣವನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಹಳೆಯ ಕಟ್ಟಡದ ಸೆಂಟ್ರಲ್ ಹಾಲ್ ನಲ್ಲಿ ಸಂಸತ್ತನ್ನುದ್ದೇಶಿಸಿ ಮಾತನಾಡಿದರು.ಇದು ಕೇವಲ ನೂತನ ಸಂಸತ್ ಭವನವಲ್ಲ. ಇದು 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತದೆ. ಇದು ಜಗತ್ತಿಗೆ ನಮ್ಮ ದೃಢನಿಶ್ಚಯವನ್ನು ತೋರಿಸುತ್ತದೆ. ಇದು ಪ್ರಜಾಪ್ರಭುತ್ವದ ದೇವಾಲಯ ಎಂದು ಅವರು ಹೇಳಿದರು.
ಪ್ರತಿಯೊಂದು ದೇಶದ ಅಭಿವೃದ್ಧಿಯ ಪಯಣದಲ್ಲಿ ಅಮರವಾಗುವ ಕೆಲವು ಕ್ಷಣಗಳು ಬರುತ್ತವೆ. ಮೇ 28 ಅಂತಹ ದಿನವೆಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು.
ಈ ಹೊಸ ಸಂಸತ್ತು ಸ್ವಾವಲಂಬಿ ಭಾರತದ ಉದಯಕ್ಕೆ ಸಾಕ್ಷಿಯಾಗಲಿದೆ. ಭಾರತವು ಮುಂದೆ ಸಾಗಿದಾಗ ಜಗತ್ತು ಮುಂದೆ ಸಾಗುತ್ತದೆ. ಈ ಹೊಸ ಸಂಸತ್ತು ಭಾರತದ ಅಭಿವೃದ್ಧಿಯ ಮೂಲಕ ವಿಶ್ವದ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದರು.