ಬೆಂಗಳೂರು: ಬಿಜೆಪಿ ಯವರು 15 ಲಕ್ಷ ಅಕೌಂಟ್‌ಗೆ ಹಾಕುತ್ತೇವೆ ಅಂದಿದ್ರಲ್ವಾ ಹಾಕಿದ್ರಾ. ಒಂದು ಲಕ್ಷ ರೂಪಾಯಿ ಸಾಲ ಮನ್ನಾ ಮಾಡುತ್ತೇವೆ ಎಂದಿದ್ದರು. ಆ ವಿಚಾರ ಏನಾಯಿತು. ಮೊದಲು ಅವರು ನೀಡಿದ್ದ ಭರವಸೆಗಳ ಬಗ್ಗೆ ಮಾತನಾಡಲಿ ಎಂದು ಬಿಜೆಪಿ ನಾಯಕರ ಟೀಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್‌ನ ಐದು ಗ್ಯಾರಂಟಿಗಳ ಬಗ್ಗೆ ವಿಪಕ್ಷಗಳಿಂದ ಟೀಕೆ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಗು ಹುಟ್ಟಿ 15 ದಿನ ಆಗಿದೆ, ಬಟ್ಟೆ ಹೊಲಿಸಬೇಕು, ಅಳತೆ ಕೊಡಬೇಕು ಎಂದು ಟಾಂಗ್ ನೀಡಿದ್ದಾರೆ. ಜೂನ್ 1ರಂದು ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ. 5 ಗ್ಯಾರಂಟಿಗಳ ಜಾರಿ ಬಗ್ಗೆ ಗೈಡ್‌ಲೈನ್ಸ್ ಬರಲಿದೆ. ಪ್ರತಿಭಟನೆ ಮಾಡುವವರಿಗೆ ಬೇಡ ಅನ್ನಲ್ಲ, ಮಾಡಲಿ ಎಂದರು.