ಬೆಂಗಳೂರು: ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡುತ್ತೇವೆ, ಬಿಪಿಎಲ್ ಕಾರ್ಡ್ ಇದ್ರೆ ಮಾತ್ರ ಅಂತ ನಾವು ಗ್ಯಾರಂಟಿಯಲ್ಲಿ ಹೇಳಿರಲಿಲ್ಲ. ಈಗಲೂ ನಾವು ಬಿಪಿಎಲ್ ಕಾರ್ಡ್ ಬೇಕು ಅನ್ನಲ್ಲ ಎಂದಿದ್ದಾರೆ. ಹೀಗಾಗಿ ಎಲ್ಲಾ ಮಹಿಳೆಯರಿಗೂ ಬಸ್ನಲ್ಲಿ ಉಚಿತ ಪ್ರಯಾಣವಿದ್ದು, ಇದಕ್ಕೆ ಯಾವುದೇ ಷರತ್ತುಗಳಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ
ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವರು ಮುಖ್ಯಮಂತ್ರಿಗಳು ಎಲ್ಲ ಕಾರ್ಯದರ್ಶಿಗಳು ಹಾಗೂ ಎಂಡಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ಎಲ್ಲ ನಿಗಮಗಳು ಒಂದಷ್ಟು ಗೈಡ್ಲೈನ್ಸ್ ನೀಡಿದ್ದಾರೆ. ಅವೆಲ್ಲವನ್ನೂ ಸಚಿವ ಸಂಪುಟದಲ್ಲಿ ಇಟ್ಟು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.