Share this news

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಲೆಕ್ಷನ್ ಮತ್ತು ಕಮಿಷನ್ ಆಡಳಿತ ಕೊನೆಗೊಂಡಿದೆ. ಸರಕಾರಿ ಅಧಿಕಾರಿಗಳು ಜನಸಾಮಾನ್ಯರಿಗೆ ಸಾಮಾಜಿಕ ನ್ಯಾಯ ಕೊಡುವಲ್ಲಿ ಪ್ರಾಮಾಣಿಕವಾಗಿ ಸ್ಪಂದಿಸಬೇಕಾಗಿದೆ. ಯಾರ ಒತ್ತಡವೂ ಇಲ್ಲದೇ ನಿರ್ಭಯವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಕಾರ್ಕಳ ಪುರಸಭಾ ಸದಸ್ಯ ಹಾಗೂ ಕಾಂಗ್ರೆಸ್ ವಕ್ತಾರ ಶುಭದರಾವ್ ಹೇಳಿದ್ದಾರೆ.

ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಅಧಿಕಾರಿಗಳು ಭಾರೀ ತೊಂದರೆ ಪಡುವಂತಾಗಿತ್ತು. ಎಲ್ಲಾ ಇಲಾಖೆಯ ಅಧಿಕಾರಿಗಳು ಒತ್ತಡಕ್ಕೆ ಬಲಿಬಿದ್ದು ಕಾರ್ಯನಿರ್ವಹಿಸಬೇಕಾದ ಪರಿಸ್ಥಿತಿಯಿತ್ತು.ಆದರೆ ಇವೆಲ್ಲವುಗಳಿಗೆ ಈಗ ಮುಕ್ತಿ ಸಿಕ್ಕಿದೆ. ರಾಜ್ಯದಲ್ಲಿ ಕಾಂಗ್ರೆಸ್ಆಡಳಿತವಿದ್ದು, ಜನತೆಯ ಆಶೋತ್ತರಗಳಿಗೆ ಸ್ಪಂದಿಸಲಿದೆ,ಇದಕ್ಕೆ ಅಧಿಕಾರಿಗಳು ಕೈಜೋಡಿಸಬೇಕಿದೆ ಎಂದಿದ್ದಾರೆ.

ಅಧಿಕಾರಿಗಳು ಅಥವಾ ಜನಸಾಮಾನ್ಯರು ಒತ್ತಡಕ್ಕೆ ಬಲಿಬೀಳುವ ಪ್ರಶ್ನೆಯೇ ಎದುರಾಗುವುದಿಲ್ಲ ಯಾವುದೇ ಇಲಾಖೆಯ ಅಧಿಕಾರಿಗಳು ಕರ್ತವ್ಯಲೋಪ ಎಸಗಬಾರದು.ಸರಕಾರದ ಸವಲತ್ತುಗಳನ್ನು ಜನತೆಗೆ ಮುಟ್ಟಿಸುವಲ್ಲಿ ತಾರತಮ್ಯ ಎಸಗಬಾರದು. ಮಾನ್ಯ ಮುಖ್ಯಮಂತ್ರಿಗಳ ಆದೇಶದಂತೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಪ್ರತಿಯೊಬ್ಬರನ್ನು ಸಂಪರ್ಕಿಸಿ ಸರಕಾರದ ಸವಲತ್ತುಗಳನ್ನು ಮುಟ್ಟಿಸುವ ಕೆಲಸ ಜತೆಗೆ ಸವಲತ್ತುಗಳನ್ನುಪಡೆಯುವಲ್ಲಿ ಸೂಕ್ತ ಮಾರ್ಗದರ್ಶನವನ್ನು ಕೂಡಾ ನೀಡಬೇಕು ಒಂದುವೇಳೆ ರಾಜಕೀಯ ಒತ್ತಡ ಬಳಸಿ ಕಿರುಕುಳ ನೀಡಿದ್ದಲ್ಲಿ ನಮ್ಮ ಗಮನಕ್ಕೆ ತನ್ನಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳ ಜತೆ ನಾವಿದ್ದೇವೆ ಎಂದು ಕಾಂಗ್ರೆಸ್ ವಕ್ತಾರ ಶುಭದ ರಾವ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *