Share this news

ಕಾರ್ಕಳ: ಮರ್ಣೆ ಗ್ರಾಮದ ಅಜೆಕಾರು  ಪರಿಶಿಷ್ಟ ಪಂಗಡಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದ ಅಡುಗೆ ಕೆಲಸಗಾರ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕಳೆದ ಹಲವಾರು ವರ್ಷಗಳಿಂದ ಇದೇ ಹಾಸ್ಟೆಲ್ ನಲ್ಲಿ ಅಡುಗೆ ಕೆಲಸಗಾರನಾಗಿ ಕೆಲಸ ಮಾಡಿಕೊಂಡಿದ್ದ ಆರೋಪಿ ವಿಠಲ ಎಂಬಾತ ಮಂಗಳವಾರ ಸಂಜೆ ಬಾಲಕನಿಗೆ ಪುಸ್ತಕ ಕೊಡುವುದಾಗಿ ಪುಸಲಾಯಿಸಿ ಹಾಸ್ಟೆಲ್ ಗೆ ಕರೆಯಿಸಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಬಾಲಕನ ಪೋಷಕರು ಅಜೆಕಾರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಪೋಕ್ಸೋ ಕಾಯಿದೆಯಡಿ ಆರೋಪಿಯ ವಿರುದ್ದ ಪ್ರಕರಣ ದಾಖಲಾಗಿದೆ.

ಈ ಕುರಿತು ಕಾರ್ಕಳ ಎಎಸ್‌ಪಿ ಪ್ರತಿಕ್ರಿಯಿಸಿದ್ದು, ಬಾಲಕನ ಪೋಷಕರ ದೂರಿನ ಮೇರೆಗೆ ಆರೋಪಿಯ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂದನಕ್ಕೆ ಒಪ್ಪಿಸಲಾಗಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *