Share this news

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣದ ಸಿಬಿಐ ತನಿಖೆಗೆ ಈ ಹಿಂದೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ತೆರವು ಮಾಡುವಂತೆ ಸಿಬಿಐ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಆದರೆ ಇಂದು ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಮತ್ತೆ ವಿಸ್ತರಣೆ ಮಾಡಿದೆ. ಈ ಮೂಲಕ ಡಿಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಈ ಹಿಂದೆ ಡಿಕೆ ಶಿವಕುಮಾರ್ ಮನೆ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಹಾಗೂ ಜ್ಯಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ವಿಚಾರಣೆ ನಡೆಸಿದ್ದರು.

Leave a Reply

Your email address will not be published. Required fields are marked *