ಬೆಂಗಳೂರು : 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ಎಚ್ಚರಿಕೆ ನೀಡಿದೆ.
ರಾಜ್ಯ ಬಿಜೆಪಿ ಘಟಕ ಈ ಕುರಿತು ಟ್ವೀಟ್ ಮಾಡಿದ್ದು, ಎಟಿಎಂ ಸರ್ಕಾರದ ಮೊದಲ ಸಚಿವ ಸಂಪುಟದಲ್ಲೇ ಎಲ್ಲಾ 5 ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದು ಸ್ವತಃ ಗಡುವು ವಿಧಿಸಿಕೊಳ್ಳುವಾಗ ಪ್ರಿಯಾಂಕ್ ಖರ್ಗೆ ಅವರಿಗೆ ಪರಿಜ್ಞಾನ ಇರಲಿಲ್ಲವೇ? ಗ್ಯಾರಂಟಿಗಳ ನಿರೀಕ್ಷೆಯಲ್ಲಿರುವ ಕನ್ನಡಿಗರ ಪರವಾಗಿ ನಾವು ಧ್ವನಿ ಎತ್ತಿದ್ದೇವೆ. ತಾವುಗಳು ಹೇಳಿರುವ ಗ್ಯಾರಂಟಿಗಳು ಜಾರಿಯಾಗದಿದ್ದರೆ ಜನತೆಯ ಪರವಾಗಿ ಮುಂದೆ ಬೀದಿಗಿಳಿಯಲೂ ಬಿಜೆಪಿ ಸಿದ್ಧವಿದೆ ಎಂದು ಎಚ್ಚರಿಕೆ ನೀಡಿದೆ.
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಸಭೆಯ ಬಳಿಕ 5 ಗ್ಯಾರಂಟಿ ಯೋಜನೆಗಳ ಜಾರಿಗೆ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ