ಮೈಸೂರು: ಎಮ್ಮೆ,ಕೋಣಗಳನ್ನು ಕಡಿಯಬಹುದಾದರೆ ದನಗಳನ್ನು ಏಕೆ ಕಡಿಯಬಾರದು ಎಂದು ಪಶೂಸಂಗೋಪನಾ ಸಚಿವ ಕೆ.ವೆಂಕಟೇಶ್ ವಿವಾದಾತ್ಮಕ ಹೇಳಿಕೆ ನೀಡಿದ್ದು,ಇದು ಹಿಂದೂ ವಿರೋಧಿ ನೀತಿಯಾಗಿದೆ ಎಂದು ಹಿಂದೂಪರ ಸಂಘಟನೆಗಳ ಮುಖಂಡರು ಸಚಿವ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೋಹತ್ಯಾ ನಿಷೇಧ ಕಾಯಿದೆ ರದ್ದುಪಡಿಸುವ ವಿಚಾರದ ಕುರಿತಂತೆ ಸಚಿವ ಕೆ. ವೆಂಕಟೇಶ್ ಸುದ್ದಿಗಾರರ ಜತೆ ಮಾತನಾಡಿ, ನನ್ನ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಈ ಪೈಕಿ ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ತುಂಬಾ ಕಷ್ಟ ಪಡಬೇಕಾಯಿತು. 25 ಮಂದಿ ಬಂದರೂ ಸತ್ತ ಹಸುವಿನ ಮೃತದೇಹ ಎತ್ತಲು ಸಾಧ್ಯವಾಗಲಿಲ್ಲ. ಕೊನೆಗೆ ಜೆಸಿಬಿ ತರಿಸಿ ಮೃತ ಹಸುವನ್ನು ಎತ್ತಿಸಿ ಗುಂಡಿ ತೋಡಿ ಹೂಳುವ ಸ್ಥಿತಿ ನಿರ್ಮಾಣವಾಗಿದೆ,ಜನರಿಗೆ ಆಗುವ ತೊಂದರೆ ಹಾಗೂ ಕಷ್ಟವನ್ನು ತಪ್ಪಿಸಲು ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಸಚಿವರ ಈ ಹೇಳಿಕೆಯಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕೆಂಡಾಮAಡಲರಾಗಿದ್ದು ಗೋವುಗಳನ್ನು ಕಡಿಯಬೇಕು ಎನ್ನುವ ಸಚಿವರ ಹೇಳಿಕೆ ಕಾಂಗ್ರೆಸ್ ಹಿಂದೂ ವಿರೋಧಿ ನೀತಿಯನ್ನು ಸ್ಪಷ್ಟಪಡಿಸಿದೆ. ಹಿಂದೂ ಪರಂಪರೆಯಲ್ಲಿ ಗೋವಿಗೆ ಮಹತ್ವದ ಸ್ಥಾನವಿದೆ ಇಂತಹ ಪವಿತ್ರ ಗೋವನ್ನು ಕಡಿಯಬೇಕೆನ್ನುವುದು ಖಂಡನೀಯ. ಕಾಂಗ್ರೆಸ್ ಸರ್ಕಾರ ತಾಕತ್ತಿದ್ದರೆ ಗೋಹತ್ಯೆ ನಿಷೇಧಿಸಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.
ಅಮುಲ್ನಿಂದ ನಂದಿನಿಗೆ ತೊಂದರೆ ಆಗಿಲ್ಲ:
ಕರ್ನಾಟಕದ ನಂದಿನಿ ಬ್ರಾಂಡ್ ಅನ್ನು ಅಮುಲ್ ಜತೆ ವಿಲೀನಗೊಳಿಸುವ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೆ.ವೆಂಕಟೇಶ್ ರಾಜ್ಯಕ್ಕೆ ಅಮುಲ್ ಬಂದಿಲ್ಲ.ಅಮುಲ್ನಿAದ ನಂದಿನಿಗೆ ಯಾವುದೇ ತೊಂದರೆಯಾಗಿಲ್ಲ. ಮುಂದಿನ ದಿನಗಳಲ್ಲಿ ಅಮುಲ್ ಬಂದಾಗ ನೋಡೋಣ, ಆದರೆ ವಿಲೀನ ಪ್ರಕ್ರಿಯೆ ಸಧ್ಯಕ್ಕಿಲ್ಲ ಎಂದರು. ನಂದಿನಿ ಉತ್ಪನ್ನಗಳ ಉತ್ತೇಜನಕ್ಕೆ ಕ್ರಮ ಕೈಗೊಳ್ಳುತ್ತೇವೆ. ಹಸು ದತ್ತು ಯೋಜನೆ ಏನಾಗಿದೆ ಎಂದು ಪರಿಶೀಲಿಸುತ್ತೇವೆ. ಗೋ ಶಾಲೆಗಳ ನಿರ್ವಹಣೆ ಮಾಡಲು ಹಣದ ಕೊರತೆಯಿಲ್ಲ. ಆದರೆ, ನಿರ್ವಹಣೆ ಸರಿಯಾಗಿ ಆಗಿಲ್ಲ. ಮುಂದೆ ಎಲ್ಲವನ್ನೂ ಸರಿಪಡಿಸುತ್ತೇವೆ ಎಂದು ಸಚಿವ ಕೆ. ವೆಂಕಟೇಶ್ ಹೇಳಿದರು.