Share this news

ಕಾರ್ಕಳ: ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಮತ್ತು ಶಿರ್ಡಿ ಸಾಯಿಬಾಬ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಶ್ರಮದಾನದ ಮೂಲಕ ಆಗುಂಬೆಯ ಘಾಟಿಯ ಇಕ್ಕೆಲಗಳಲ್ಲಿನ ಕಸ,ಕಡ್ಡಿಗಳನ್ನು ಸ್ವಚ್ಚಗೊಳಿಸಿದರು.


ಸ್ವಚ್ಛತೆಯೆಡೆಗೆ ನಮ್ಮ ಹೆಜ್ಜೆ, ಪರಿಸರ ಕಾಳಜಿ ನಮ್ಮೆಲ್ಲರ ಹೊಣೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ಕೈಗೊಳ್ಳಲಾದ ಸ್ವಚ್ಚತಾ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಗಣಪತಿ ಭಟ್ ಮಾತನಾಡಿ, ನಮ್ಮ ದೈನಂದಿನ ಜೀವನದಲ್ಲಿ ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ಉತ್ಪತ್ತಿಯಾಗುವ ತ್ಯಾಜ್ಯದಿಂದ ಜೀವ ಸಂಕುಲಕ್ಕೆ ಮಾರಕವಾಗುತ್ತಿದೆ. ಪ್ರಮುಖವಾಗಿ ಮೋಜುಮಸ್ತಿ ಮಾಡುವವರು ಅರಣ್ಯದಲ್ಲಿ ಕಂಡಕAಡಲ್ಲಿ ಪ್ಲಾಸ್ಟಿಕ್ ಎಸೆಯುವುದರಿಂದ ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ತೊಂದರೆಯಾಗುತ್ತಿದೆ ಎಂದರು.


ಎನ್ನೆಸೆಸ್ ಯೋಜನಾಧಿಕಾರಿ ಉಮೇಶ್ ಮಾತನಾಡಿ, ನಾವು ಶಿಕ್ಷಿತರಾದರೂ ಅನಕ್ಷರಸ್ಥರಂತೆ ವರ್ತಿಸುತ್ತಿದ್ದೇವೆ. ನಾವು ಬಳಸಿದ ತ್ಯಾಜ್ಯ ವಸ್ತುಗಳನ್ನು, ಕಸ, ಪ್ಲಾಸ್ಟಿಕ್ ಇತ್ಯಾದಿಗಳನ್ನು ಜವಾಬ್ದಾರಿಯಿಲ್ಲದೇ ಕಂಡಲ್ಲಿ ಎಸೆಯುತ್ತಿದ್ದೇವೆ. ಅದು ಕಾಡಿನ ಪರಿಸರವನ್ನು ಮಾಲಿನ್ಯಗೊಳಿಸಿ ಅಲ್ಲಿನ ಪ್ರಾಣಿಪಕ್ಷಿಗಳಿಗೂ ತೊಂದರೆಯುAಟುಮಾಡುತ್ತಿದೆ. ಆದ್ದರಿಂದ ಪ್ರವಾಸಿ ಸ್ಥಳ ಹಾಗೂ ಪ್ರೇಕ್ಷಣೀಯ ಸ್ಥಳಗಳನ್ನು ಸ್ವಂತ ಕಾಳಜಿಯಿಂದ ನಿರ್ಮಲವಾಗಿಡುವ ಕಡೆಗೆ ಗಮನ ಹರಿಸಬೇಕಾಗಿದೆ ಎಂದರು.


ಶಿರ್ಡಿ ಡಿಗ್ರಿ ಕಾಲೇಜಿನ ಆಶೀಶ್ ಶೆಟ್ಟಿ ಮಾತನಾಡಿ ಪ್ರತಿಯೊಬ್ಬರಿಗೂ ಸಾಮಾಜಿಕ ಪ್ರಜ್ಞೆಯಿರಬೇಕು. ಕೊಳಕು ಮಾಡುವ ಸಂಸ್ಕೃತಿ ನಿಲ್ಲಬೇಕು. ಎಲ್ಲರೂ ಬದುಕಿ ಬಾಳುವ ವಾತಾವರಣ ನಿರ್ಮಾಣ ಮಾಡುವುದಕ್ಕಾಗಿ ನಾವೆಲ್ಲ ಟೊಂಕಕಟ್ಟಿ ನಿಲ್ಲಬೇಕಾದ ಅನಿರ್ವಾಯತೆಯಿದೆ. ಪರಿಸರ ಪ್ರೀತಿ ಬೆಳೆಸೋಣ ಎಂದರು.
ಈ ಸಂದರ್ಭದಲ್ಲಿ ಆಗುಂಬೆಯ ಘಾಟಿಯ ಆರಂಭದಿAದ ಸೋಮೇಶ್ವರ ಪೇಟೆಯವರೆಗೆ ನೂರಾರು ವಿದ್ಯಾರ್ಥಿಗಳು ಸ್ವಚ್ಛತಾ ಅಭಿಯಾನ ನೇರವೇರಿಸಿದರು. ಉಪನ್ಯಾಸಕರಾದ ಚಂದ್ರಕಾAತ ಆಚಾರ್ಯ, ಶ್ರೀನಿಧಿ, ಪ್ರಿಯಾಂಕ, ತಿಪ್ಪೇಸ್ವಾಮಿ, ಶಶಿಧರ ಭಟ್ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಹರೀಶ್, ಚ್ರೈತ್ರಾ,ವಲಯಾರಣ್ಯಧಿಕಾರಿ ಗೌರವ್ ಹಾಗೂ ಅರಣ್ಯಾಧಿಕಾರಿಗಳು ಮತ್ತು ಶಿರ್ಡಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *