ಕಾರ್ಕಳ: ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿದೆ. ಈ ನಿಟ್ಟಿನಲ್ಲಿ ಸರ್ಕಾರವು ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವುದನ್ನು ಬಿಟ್ಟು ದ್ವೇಷದ ರಾಜಕಾರಣ ಮಾಡಲು ಹೊರಟಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಸುನಿಲ್ ಕುಮಾರ್ ಟ್ವೀಟ್ ಮಾಡಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿ ಚಟುವಟಿಕೆಗಳನ್ನು ಬಿಟ್ಟು ಬಿಜೆಪಿ ಹಾಗೂ ಸಂಘ ಪರಿವಾರದ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ.ಪ್ರಿಯಾಂಕ್ ಖರ್ಗೆಯವರು ಆರೆಸ್ಸೆಸ್ ನಿಷೇಧಿಸುತ್ತೇನೆ ಎನ್ನುವ ಉತ್ಸಾಹದಲ್ಲಿದ್ದರೆ,ಇತ್ತ ಎಂ.ಬಿ ಪಾಟೀಲ್ ಅವರು, ಚಕ್ರವರ್ತಿ ಸೂಲಿಬೆಲೆಗೆ ಕಂಬಿ ಎಣಿಸುವಂತೆ ಮಾಡುತ್ತೇನೆ ಎನ್ನುವ ಹೇಳಿಕೆ ನೀಡಿದರೆ ಪಶುಸಂಗೋಪನಾ ಸಚಿವ ವೆಂಕಟೇಶ್ ಅವರು ಗೋಹತ್ಯೆ ಕಾಯಿದೆಯನ್ನು ನಿಷೇಧಿಸಿ ಗೋವಧೆ ಮಾಡುವ ಅತ್ಯುತ್ಸಾಹದಲ್ಲಿದ್ದಾರೆ.ಸಚಿವರಿಗೆ ಸಂಬಂಧಪಡದ ವಿಷಯಗಳ ಕುರಿತು ಚರ್ಚಿಸುವ ಮೂಲಕ ಪ್ರೀತಿಯ ಅಂಗಡಿ ತೆರೆಯುತ್ತೇವೆ ಎಂದವರು ಇದೀಗ ದ್ವೇಷದ ದ ದುಖಾನು ತೆರೆಯುತ್ತಿದ್ದಾರೆ. ಇಂತಹ ಭಂಡತನದ ಮಾತುಗಳನ್ನು ಜನ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಟ್ವೀಟ್ ಮೂಲಕ ಶಾಸಕ ಸುನಿಲ್ ಕುಮಾರ್ ಸರ್ಕಾರವನ್ನು ಕುಟುಕಿದ್ದಾರೆ



