Share this news

ಕಾರ್ಕಳ: ಉಡುಪಿ ಕಾರ್ಕಳ ಮುಖ್ಯರಸ್ತೆಯ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ಬಸ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದೆ.

ಜಾರ್ಕಳದ ನೆಲ್ಲಿಗುಡ್ಡೆ ನಿವಾಸಿ ಕಾರ್ತಿಕ್ (23) ಮೃತಪಟ್ಟ ಬೈಕ್ ಸವಾರ.ಕಾರ್ತಿಕ್ ಬೈಲೂರಿನಿಂದ ಜಾರ್ಕಳದ ಕಡೆಗೆ ಹೋಗುತ್ತಿದ್ದಾಗ ಕಾರ್ಕಳದಿಂದ ಉಡುಪಿಗೆ ಸಾಗುತ್ತಿದ್ದ ಖಾಸಗಿ ಬಸ್ ಡಿಕ್ಕಿಯಾಗಿ ಈ ಭೀಕರ ದುರ್ಘಟನೆ ನಡೆದಿದೆ. ಅಪಘಾತದಿಂದ ಸ್ಕೂಟರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.ಮೃತ ಕಾರ್ತಿಕ್ ಪತ್ನಿ ಹಾಗೂ 10 ತಿಂಗಳ ಮಗುವನ್ನು ಅಗಲಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *