ಕಾರ್ಕಳ : ಮಾನವನ ವ್ಯಕ್ತಿತ್ವಕ್ಕೆ ನಯ ವಿನಯತೆ ಭೂಷಣ. ಅಂತಹ ನಯ ವಿನಯತೆ ಮೈಗೂಡಿಸಿಕೊಂಡಿರುವ ಉದಯ ಶೆಟ್ಟಿ ಅವರು ರಕ್ತದಾನ ಶಿಬಿರ ಮತ್ತು ಸರಕಾರಿ ಶಾಲಾ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನ ಮುಂತಾದ ಸಮಾಜ ಸೇವೆಗಳ ಮೂಲಕ ಹುಟ್ಟುಹಬ್ಬವನ್ನು ಆಚರಿಸುತ್ತಿರುವುದು ನಿಜಕ್ಕೂ ಪ್ರಶಂಸನೀಯ ಎಂದು ಕೇಮಾರು ಶ್ರೀ ಸಾಂದೀಪನೀ ಸಾಧನಾಶ್ರಮದ ಶ್ರೀ ಈಶವಿಠಲದಾಸ ಸ್ವಾಮೀಜಿ ಹೇಳಿದರು.

ಅವರು ಮೇ 8ರಂದು ಉದಯ ಶೆಟ್ಟಿ ಮುನಿಯಾಲು ಅವರ 50ನೇ ಹುಟ್ಟು ಹಬ್ಬದ ಪ್ರಯುಕ್ತ ಉದಯ ಶೆಟ್ಟಿ ಅಭಿಮಾನಿ ಬಳಗದ ವತಿಯಿಂದ ಕಾರ್ಕಳ ಪುಲ್ಕೇರಿ ಲಕ್ಷ್ಮೀದೇವಿ ಕಲ್ಯಾಣ ಮಂಟಪದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ಆಶೀರ್ವಚನ ನೀಡಿದರು.ಉದಯ ಶೆಟ್ಟಿಯವರು ಒಬ್ಬ ಉತ್ತಮ ಸಮಾಜ ಸೇವಕನಾಗಿದ್ದು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಹಾಯ ಮಾಡುವ ಸೇವಾ ಮನೋಭಾವನೆ ಅವರಲ್ಲಿದೆ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮಾತನಾಡಿ ಉದಯ ಶೆಟ್ಟಿ ಅವರ ಮೇರು ವ್ಯಕ್ತಿತ್ವವೇ ಅವರನ್ನು ಈ ಸ್ಥಾನದಲ್ಲಿ ಇರಿಸಿದೆ. ಮುಂದಿನ ದಿನಗಳಲ್ಲಿ ಉದಯ ಶೆಟ್ಟಿ ಅವರು ಕಾರ್ಕಳದ ಜನತೆಯ ಧ್ವನಿಯಾಗಲಿದ್ದಾರೆ ಎಂದರು.
ಮುAಬೈ ಉದ್ಯಮಿ ಗಿರೀಶ್ ಶೆಟ್ಟಿ ಮಾತನಾಡಿ ಸಮಾಜ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಉದಯಶೆಟ್ಟಿ ಅವರು ಇನ್ನೂ ಹೆಚ್ಚಿನ ಜನಸೇವೆ ಮಾಡುವಂತಾಗಲಿ ಎಂದು ಹರಸಿದರು.

ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ 600 ಕ್ಕಿಂತ ಅಧಿಕ ಅಂಕ ಪಡೆದ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ದ್ವಿತೀಯ ಪಿಯುಸಿಯಲ್ಲಿ 575 ಕ್ಕಿಂತ ಹೆಚ್ಚು ಅಂಕ ಪಡೆದ ಸರಕಾರಿ ಕಾಲೇಜು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಬಾಯರಿ, ಕಾಂಗ್ರೆಸ್ ಮುಖಂಡರಾದ ಸುರೇಂದ್ರ ಶೆಟ್ಟಿ, ನೀರೆ ಕೃಷ್ಣ ಶೆಟ್ಟಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೀಪಕ್ ಕೋಟ್ಯಾನ್, ಅಮಿತ್ ಶೆಟ್ಟಿ ಉಪಸ್ಥಿತರಿದ್ದರು.
ಗೋಪಿನಾಥ್ ಭಟ್ ಮುನಿಯಲು ಸ್ವಾಗತಿಸಿ, ತಾಪಂ ಮಾಜಿ ಸದಸ್ಯ ಸುಧಾಕರ್ ಶೆಟ್ಟಿ ಮುಡಾರು ವಂದಿಸಿದರು. ಸುಧಾಕರ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.



