ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಹೊಸ ಪಿಂಚಣಿ ನೀತಿಯನ್ನು (NPS) ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆ (OPS) ಪುನರ್ ಜಾರಿಗೆ ತರಲು ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ನೇತೃತ್ವದ ನಿಯೋಗ ಪ್ರಣಾಳಿಕೆಯಲ್ಲಿನ ಭರವಸೆಯಂತೆ ಎನ್.ಪಿ.ಎಸ್ ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಹಾಗೂ 7ನೇ ವೇತನ ಆಯೋಗದ ವರದಿಯನ್ನು ಪಡೆದು ಶೀಘ್ರ ಅನುಷ್ಠಾನಗೊಳಿಸುವಂತೆ ಮನವಿ ಮಾಡಿದ್ದಾರೆ.
ಈ ಮನವಿಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಹೊಸ ಪಿಂಚಣಿ ನೀತಿಯನ್ನು ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆಯನ್ನು ಪುನರ್ ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.