ಕಾರ್ಕಳ: ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿಯ ಹೆದ್ದಾರಿಯಲ್ಲಿ ಕಾರೊಂದು ಪಲ್ಟಿಯಾದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.
ಬೈಲೂರು ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಕಣಜಾರಿನ ವ್ಯಕ್ತಿಯೊಬ್ಬರಿಗೆ ಸೇರಿದ ಕಾರು ಇದಾಗಿದೆ ಎಂದು ತಿಳಿದುಬಂದಿದೆ.ಅಪಘಾತದಿಂದ ಚಾಲಕ ಹಾಗೂ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.