ಹುಬ್ಬಳ್ಳಿ :ಮುಂದಿನ ಜುಲೈ ತಿಂಗಳಿನಲ್ಲಿ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಿ ರಾಜ್ಯದಲ್ಲಿರುವ ಎಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು ಪುನಶ್ಚೇತನಗೊಳಿಸಲಾಗುವುದೆಂದು ಎಂದು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ.
ಅವರು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಆದರೆ ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಏನೂ ಮಾಡಲಿಲ್ಲ. ರೈತರು, ಸಾರ್ವಜನಿಕರು ಹಾಗೂ ವರ್ತಕರು ಎಪಿಎಂಸಿ ತಿದ್ದುಪಡಿ ಕಾಯಿದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸುತ್ತಿದ್ದಾರೆ. ಹೀಗಾಗಿ ನಮ್ಮ ಸರ್ಕಾರ ಚಿಂತನೆ ನಡೆಸಿದ್ದು, ಜುಲೈ ಅಧಿವೇಶನದಲ್ಲಿ ವಿಧೇಯಕ ಮಂಡಿಸಿ ಸದನದ ಅನುಮೋದನೆ ಪಡೆಯಲಾಗುವುದೆಂದರು.