ಕಿನ್ನಿಗೋಳಿ: ಕಿನ್ನಿಗೋಳಿಯ ಸೈಂಟ್ ಮೇರಿಸ್ ಸೆಂಟ್ರಲ್ ಶಾಲೆಗೆ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಡಾ. ಪೀಟರ್ ಪಾವ್ನ್ ಸಲ್ದಾನ್ಹಾ ಅವರು ಅಧೀಕೃತ ಭೇಟಿ ನೀಡಿದರು. ಅವರು ಬೋಧಕ, ಬೋಧಕೇತರ ಮತ್ತು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿಗಳ ವೃತ್ತಿಜೀವನದಲ್ಲಿ ಶಿಕ್ಷಕರು ವಹಿಸಬೇಕಾದ ಪಾತ್ರದ ಮಹತ್ವವನ್ನು ವಿವರಿಸಿ ಹೇಳಿದರು.
ಕಳೆದ 5 ವರ್ಷಗಳಿಂದ 10ನೇ ತರಗತಿಯಲ್ಲಿ ಈ ಶೈಕ್ಷಣಿಕ ಸಂಸ್ಥೆಗೆ ಶೇ. 100 ಫಲಿತಾಂಶ ಬರುತ್ತಿದೆ ಇದೇ ರೀತಿ ಮುಂದುವರಿಯಲಿ ಎಂದು ಶಿಕ್ಷಕರಿಗೆ ಮತ್ತು ಮಕ್ಕಳಿಗೆ ಶುಭ ಹಾರೈಸಿದರು. ಮಕ್ಕಳು ಕೇವಲ ಶಿಕ್ಷಣ ಮಾತ್ರವಲ್ಲ ಒಳ್ಳೆಯ ಮೌಲ್ಯಗಳನ್ನೂ ಸಹ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಶಾಲಾ ಸಂಚಾಲಕರು, ವಂದನೀಯ ಗುರು ಲೋಬೋ, ಧರ್ಮಾಧ್ಯಕ್ಷರ ಕಾರ್ಯದರ್ಶಿಗಳಾಗಿರುವ ವಂದನೀಯ ಗುರು ತ್ರಿಶಾನ್ ಡಿಸೋಜ, ಶಾಲಾ ಪಾಶುಪಾಲರಾಗಿರುವ ಲ್ಯಾನ್ಸಿ ಜೋಯಲ್ ಸಲ್ಮಾನ್ನ, ಚರ್ಚ್ ಸಹಾಯಕ ಧರ್ಮಗುರು ವಿವೇಕ್ ಪಿಂಟೊ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಸ್ಥಾನಿ ಪಿಂಟೊ, ಕಾರ್ಯದರ್ಶಿ ಅನಿತಾ ನೊರೊನ್ಹಾ, ಚರ್ಚನ ಪಾಲನಾ ಮಂಡಳಿಯ ಉಪಾಧ್ಯಕ್ಷ ವಿಲಿಯಂ ಡಿಸೋಜ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.