ಹೆಬ್ರಿ: ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಸೀತಾನದಿ ಎಂಬಲ್ಲಿನ ಜಕ್ಕನಮಕ್ಕಿ ತಿರುವಿನಲ್ಲಿ ಭಾನುವಾರ ಮಧ್ಯಾಹ್ನ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು,ಈ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಸೇರಿದಂತೆ ಇನ್ನೋರ್ವ ಶಿಕ್ಷಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗAಭೀರ ಪರಿಸ್ಥಿತಿಯಲ್ಲಿರುವ ಶಿಕ್ಷರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಭೀಕರ ಅಪಘಾತದಲ್ಲಿ ಉಡುಪಿ ಡಿಡಿಪಿಐ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ಸೋಮಶೇಖರ ಎಂಬವರು ಮೃತಪಟ್ಟ ದುರ್ದೈವಿಗಳು. ಈ ಅಪಘಾತದಲ್ಲಿ ಇನ್ನೋರ್ವ ಶಿಕ್ಷಕ ಸುದರ್ಶನ್ ಹಾಗೂ ಕಾರು ಚಾಲಕ ಸತೀಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಉಡುಪಿಯಿAದ ಹೆಬ್ರಿ ಮೂಲಕ ಆಗುಂಬೆ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಮಿನಿ ಬಸ್ ಜಕ್ಕನಮಕ್ಕಿ ತಿರುವಿನಲ್ಲಿ ಸೋಮೇಶ್ವರ ಕಡೆಯಿಂದ ಉಡುಪಿಗೆ ಕಡೆಗೆ ತೆರಳುತ್ತಿದ್ದ ಕಾರಿಗೆ ಡಿಕ್ಕಿಯಾಗಿದೆ. ಹುಂಡೈ ಇಯಾನ್ ಕಾರಿನಲ್ಲಿ ಶನಿವಾರ ನಾಲ್ವರು ದಾವಣಗೆರೆ ಜಿಲ್ಲೆಯ ಚೆನ್ನಗಿರಿಯಲ್ಲಿ ಸ್ನೇಹಿನ ಶಿಕ್ಷಕರೊಬ್ಬರ ಮದುವೆಗೆ ಹೋಗಿದ್ದರು ಇಂದು ಬೆಳಗ್ಗೆ ಚೆನ್ನಗಿರಿಯಿಂದ ಹೊರಟು ಉಡುಪಿಗೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.