ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವತಿಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ 20ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಸತ್ಯದೇವತಾ ಕಲ್ಲುರ್ಟಿ, ಸೋಮನಾಥೇಶ್ವರಿ ದೇವಸ್ಥಾನದ ಆವರಣದಲ್ಲಿ ನಡೆಯಿತು.
ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾಜಿ ಸೈನಿಕ ಉಮೇಶ್ ಮಾಲಾಡಿ, ಉಮೇಶ್ ಬಂಗೇರ ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯಧಿಕ ಅಂಕ ಗಳಿಸಿದ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅಭಿಷೇಕ್ ಎಂ.ವಿ ಅವರನ್ನು ಸನ್ಮಾನಿಸಲಾಯಿತು .
ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ ಪದ್ಮಪ್ರಸಾದ್ ಅಜಿಲ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಮಾಜಿ ಶಾಸಕ ಕೆ ವಸಂತ ಬಂಗೇರ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಸಮಾಜ ಸೇವಕ ರವಿ ಕಟಪಾಡಿ, ಅಳದಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸೌಮ್ಯ, ಹರಿಪ್ರಸಾದ್ ಹಾಗೂ ಅಳದಂಗಡಿ ಸತ್ಯ ದೇವತೆ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ ಉಪಸ್ಥೀತರಿದ್ದರು.
ಸಮಾರೋಪ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ವಿಧ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಿಸಿದರು