ಮೂಲ್ಕಿ: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿ ಎರಡನೇ ಬಾರಿಗೆ ಆಯ್ಕೆಯಾದ ಉಮಾನಾಥ್.ಎ,ಕೋಟ್ಯಾನ್ ಅವರಿಗೆ ಪಡುಪಣಂಬೂರಿನ ಮೂಲ್ಕಿ ಸೀಮೆ ಅರಮನೆ ಧರ್ಮಚಾವಡಿಯಲ್ಲಿ ಭಾನುವಾರ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೀಮೆಯ ಅರಸರಾದ ಯಂ. ದುಗ್ಗಣ್ಣ ಸಾವಂತರು ವಹಿಸಿ ಮಾತನಾಡಿ, ಶಾಸಕರ ಶಿಸ್ತು ಬದ್ಧ ಜೀವನ, ಸರಳತೆ,ಉತ್ತಮ ಅಭಿವೃದ್ಧಿ ಕಾರ್ಯಗಳು ಎಲ್ಲರಿಗೂ ಆದರ್ಶಪ್ರಾಯವಾಗಿದ್ದು ಇಂದಿನ ಯುವ ಜನಾಂಗಕ್ಕೆ ಮಾದರಿ.ಎರಡನೇ ಬಾರಿ ಜನಮನ್ನಣೆ ಮೂಲಕ ಆಯ್ಕೆಯಾದ ಶಾಸಕ ಉಮಾನಾಥ ಕೋಟ್ಯಾನ್ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳು ಕ್ಷೇತ್ರದಲ್ಲಿ ನಿರಂತರವಾಗಿ ನಡೆಯಲಿ ಎಂದರು.
ತೋಕೂರು ಶ್ರೀ ಸುಬ್ರಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರಿದಾಸ್ ಭಟ್ ರವರು ಅಭಿನಂದನಾ ಭಾಷಣ ಮಾಡಿದರು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತಸರ ಮನೋಹರ ಶೆಟ್ಟಿ, ಜಿ.ಪಂ. ಮಾಜೀ ಉಪಾಧ್ಯಕ್ಷೆ ಕಸ್ತೂರಿ ಪಂಜ, ಉದ್ಯಮಿ ಸೂರ್ಯಕುಮಾರ್, ಹಳೆಯಂಗಡಿ, ಪಡುಪಣಂಬೂರು ಗ್ರಾ.ಪಂ. ಉಪಾಧ್ಯಕ್ಷೆ ಕುಸುಮಾ ಚಂದ್ರಶೇಖರ್, ಉದ್ಯಮಿಗಳಾದ ವಿದ್ಯಾಧರ್ ಶೆಟ್ಟಿ ಕೊಲ್ನಾಡು ಗುತ್ತು, ಗೌತಮ್ ಜೈನ್ ಮುಲ್ಕಿ ಅರಮನೆ,ವಿನೋದ್ ಸಾಲ್ಯಾನ್ ಬೆಳ್ಳಾಯರು ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನವೀನ್ ಶೆಟ್ಟಿ ಎಷ್ಟೇಮಾರ್ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸತತ ಎರಡನೇ ಬಾರಿಗೆ ಆಯ್ಕೆಯಾದ ಶಾಸಕ ಉಮಾನಾಥ್ ಕೋಟ್ಯಾನ್ ಅವರನ್ನು ಅರಸುಸೀಮೆಯ ವತಿಯಿಂದ ಸನ್ಮಾನಿಸಲಾಯಿತು