ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷಕ್ಕೆ ದುಷ್ಕರ್ಮಿಗಳಿಂದ ಬಲಿಯಾದವರ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ ಘೋಷಿಸಲಾಗಿದೆ. 2018 ರ ಜ.3 ರಂದು ಸುರತ್ಕಲ್ ನ ಕಾಟಿಪಳ್ಳದ ದೀಪಕ್ ರಾವ್, 2022 ರ ಜು. 19 ರಂದು ಬೆಳ್ಳಾರೆಯ ಮಸೂದ್, 28 ರಂದು ಮಂಗಳಪೇಟೆಯ ಮಹಮ್ಮದ್ ಫಾಜೀಜ್, ಡಿ. 24 ರಂದು ಕಾಟಿಪಳ್ಳದ ಅಬ್ದುಲ್ ಜಲೀಲ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದು, ಪ್ರಕರಣ ದಾಖಲಾಗಿತ್ತು. ಇದೀಗ ರಾಜ್ಯ ಸರ್ಕಾರವು ಈ ನಾಲ್ವರು ಕುಟುಂಬಗಳಿಗೆ ತಲಾ25 ಲಕ್ಷ ರೂ.ಪರಿಹಾರ ಘೋಷಿಸಿದೆ.

