ಮೂಡಬಿದಿರೆ: ಮನಸ್ಸು ಮತ್ತು ದೇಹದ ಆರೋಗ್ಯಕ್ಕೆ ಯೋಗ ಅತ್ಯಂತ ಉತ್ತಮ ಔಷಧಿಯಾಗಿದೆ.ಯೋಗದಿಂದ ರೋಗಮುಕ್ತ ಸಮಾಜ ನಿರ್ಮಾಣ ಸಾಧ್ಯವೆಂದು ಖ್ಯಾತ ಯೋಗ ತರಬೇತುದಾರ ರಾಘವೇಂದ್ರ ರಾವ್ ಅಭಿಪ್ರಾಯ ಪಟ್ಟರು.
ಅವರು ಜೂನ್ 21ರಂದು ಬುಧವಾರ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ ವಿಶ್ವ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ, ಪ್ರಸ್ತುತ ಒತ್ತಡದ ಜೀವನದಲ್ಲಿ ಮಾನಸಿಕ ನೆಮ್ಮದಿಯನ್ನು ಸಾಧಿಸಲು ಹಾಗೂ ದೈಹಿಕ ಸಾಮರ್ಥ್ಯವನ್ನು ವೃದ್ಧಿಸಲು ಯೋಗಾಸನಗಳು ಅತ್ಯಂತ ಪ್ರಯೋಜನಕಾರಿ, ಆದ್ದರಿಂದ ಪ್ರತಿನಿತ್ಯ ದೈನಂದಿನ ಬದುಕಿನಲ್ಲಿ ಯೋಗಾಭ್ಯಾವನ್ನು ಅಳವಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು.
ರಶ್ಮಿತಾ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಎಕ್ಸಲೆಂಟ್ ಸಂಸ್ಥೆಯಲ್ಲಿ ದೇಶೀಯ ಸಾಂಸ್ಕೃತಿಕ ವಿಚಾರಗಳಿಗೆ ಒತ್ತು ಕೊಡುವುದು ಹೆಮ್ಮೆಯ ವಿಚಾರ,ಯೋಗಾಭ್ಯಾಸ ಎನ್ನುವುದು ಭಾರತೀಯ ಸ್ವಸ್ಥ ಮತ್ತು ಶ್ರೀಮಂತ ಪರಂಪರೆಯ ಪ್ರತೀಕ ಎಂದು ಅಭಿಪ್ರಾಯಪಟ್ಟರು.
ಎಕ್ಸಲೆಂಟ್ ಸಂಸ್ಥೆಯ ಆಡಳಿತ ನಿರ್ದೇಶಕರಾದ ಡಾಕ್ಟರ್ ಸಂಪತ್ ಕುಮಾರ್ ಹಾಗೂ ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಅಂತರಾಷ್ಟ್ರೀಯ ಯೋಗ ಸಾಧಕಿ ವಿದ್ಯಾರ್ಥಿನಿ ಕುಮಾರಿ ಐಶಾನಿ ಜಿ ರಾಯ್ ಅವರಿಂದ ಯೋಗ ಪ್ರದರ್ಶನ ನಡೆಯಿತು. ಯೋಗ ತರಬೇತುದಾರ ರಾಘವೇಂದ್ರ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಯೋಗದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು