ಕಾರ್ಕಳ : ನಗರದ ಎನ್ ಆರ್ ರಸ್ತೆಯಲ್ಲಿ ಸಿಮೆಂಟ್ ಇಟ್ಟಿಗೆ ಸಾಗಿಸುತ್ತಿದ್ದ ಮಿನಿಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಗುರುವಾರ ಸಂಜೆ ನಡೆದಿದೆ.
ತೆಳ್ಳಾರು ಕಡೆಯಿಂದ ಜೋಡುರಸ್ತೆ ಕಡೆಗೆ ಹೋಗುತ್ತಿದ್ದ ಮಿನಿಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಲಾರಿ ಪಲ್ಟಿಯಾದ ಪರಿಣಾಮ ಚಾಲಕ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಾರಿಯಲ್ಲಿ ತುಂಬಿದ್ದ ಸಿಮೆಂಟ್ ಇಟ್ಟಿಗೆಗಳು ಪುಡಿಯಾಗಿ ನಷ್ಟ ಸಂಭವಿಸಿದೆ