ಹೆಬ್ರಿ : ಮುಳ್ಳುಗುಡ್ಡೆ ಸರ್ಕಾರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಕಾರ್ಕಳ ರಾಜಪುರ ಸಾರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಸುಮಾರು ಹತ್ತು ಸಾವಿರ ರೂಪಾಯಿ ಮೌಲ್ಯದ ನಾಲ್ಕು ಫ್ಯಾನ್ಗಳನ್ನು ಕೊಡುಗೆಯಾಗಿ ನೀಡಿದರು.
ಶಾಲೆಯಲ್ಲಿ ಗುರುವಾರ ನಡೆದ ಸರಳ ಸಮಾರಂಭದಲ್ಲಿ ರಾಜಪುರ ಸಾರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಹೆಬ್ರಿ ಶಾಖೆಯ ಶಾಖಾಧಿಕಾರಿ ಕಮಲಾಕ್ಷ ನಾಯಕ್ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಬೇಬಿ ಅವರಿಗೆ ಹಸ್ತಾಂತರಿಸಿದರು.
ಕೊಡುಗೆಯನ್ನು ನೀಡಲು ಸಹಕರಿಸಿದ ರಾಜಪುರ ಸಾರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಕಡಾರಿ ರವೀಂದ್ರ ಪ್ರಭು ಹಾಗೂ ಆಡಳಿತ ಮಂಡಳಿಯ ನಿರ್ದೇಶಕರಿಗೆ ಶಾಲಾ ಆಡಳಿತ ಪರಿಷತ್ತಿನ ಅಧ್ಯಕ್ಷರಾದ ಮೂರ್ಸಾಲು ಮೋಹನದಾಸ್ ನಾಯಕ್ ಕೃತಜ್ಞತೆ ಸಲ್ಲಿಸಿದರು. ಮುಖ್ಯ ಅತಿಥಿಯಾಗಿ ರಾಜಪುರ ಸಾರಸ್ವತ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿಯ ನಿರ್ದೇಶಕರಾದ ಮಂಜುನಾಥ ಪ್ರಭು ಉಪಸ್ಥಿತರಿದ್ದರು.
ಆಡಳಿತ ಪರಿಷತ್ತಿನ ಕಾರ್ಯದರ್ಶಿ ಜಗನ್ನಾಥ ಕುಲಾಲ್ ಸ್ವಾಗತಿಸಿದರು. ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ವಿಶ್ವನಾಥ ಕುಲಾಲ್ ವಂದಿಸಿದರು.
ಸಮಿತಿಯ ಸದಸ್ಯರು, ಮಕ್ಕಳ ಪೋಷಕರು, ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದರು.