ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲು ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ.
ಶನಿವಾರ ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಅವರು, ಚುನಾವಣೆ ಸೋಲಿನ ಹಿನ್ನೆಲೆ ನೈತಿಕ ಹೊಣೆ ಹೊತ್ತುರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.ರಾಜೀನಾಮೆ ಪತ್ರವನ್ನು ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಸಲ್ಲಿಸುವುದಾಗಿ ನಳಿನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ನನ್ನ ಎರಡು ವರ್ಷದ ಅವಧಿ ಈಗಾಗಲೇ ಮುಗಿದ ಹಿನ್ನೆಲೆಯಲ್ಲಿ ನಾನು ರಾಜೀನಾಮೆಯ ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ.
ನೂತನ ರಾಜ್ಯಾಧ್ಯಕ್ಷ ಆಯ್ಕೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಅಧ್ಯಕ್ಷ ಆಯ್ಕೆ ಕುರಿತು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಯುತ್ತದೆ. ಈಗಾಗಲೇ ಹಲವು ಆಕಾಂಕ್ಷಿಗಳು ಅಧ್ಯಕ್ಷ ಸ್ಥಾನಕ್ಕೆ ಒಲವು ವ್ಯಕ್ತಪಡಿಸಿದ್ದು,ಹೊಸ ಅಧ್ಯಕ್ಷರ ಆಯ್ಕೆಯ ಕುರಿತು ಅಂತಿಮವಾಗಿ ಹೈಕಮಾಂಡ್ ನಿರ್ಧರಿಸಲಿದೆ ಎಂದು ಹೇಳಿದರು.