ಮುಲ್ಕಿ: ಸಾಮಾಜಿಕ ಸೇವಾ ಮನೋಭಾವನೆಯ ಸಂಘಟನೆಗಳು ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು .ಈ ನಿಟ್ಟಿನಲ್ಲಿ ತೋಕೂರು ಯುವಕ ಸಂಘ ಮತ್ತು ಮಹಿಳಾ ಮಂಡಲದ ಸಾಧನೆ ಶ್ಲಾಘನೀಯ ಎಂದು ಜಯಪುರದ ಕೊಪ್ಪ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕರಾದ ವೈ ಕೃಷ್ಣಮೂರ್ತಿ ರಾವ್ ಹೇಳಿದರು.
ಅವರು ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ ರಿ ತೋಕೂರು ಮತ್ತು ರಜತ ಮಹೋತ್ಸವದ ಸಂಭ್ರಮದಲ್ಲಿರುವ ಮಹಿಳಾ ಮಂಡಲ ರಿ ತೋಕೂರು ಇವರ ಜಂಟಿ ಸಹಯೋಗದಲ್ಲಿ ನಡೆದ ಉಚಿತ ಸಮವಸ್ತ್ರ ಮತ್ತು ಪುಸ್ತಕ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡಾ,MRSM ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಶ್ರೀಮತಿ ರಾಜೇಶ್ವರಿ ಶೆಟ್ಟಿ ಮಾತನಾಡಿ, ಶಿಕ್ಷಣದ ಜೊತೆಗೆ ವಿನಯ ಮತ್ತು ಸಂಸ್ಕಾರವನ್ನು ರೂಢಿಸಿ ಕೊಳ್ಳಬೇಕೆಂದು ಮಕ್ಕಳಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿಂದೂಸ್ತಾನಿ ತೋಕೂರು ಇಲ್ಲಿನ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆಯ ಪುಸ್ತಕಗಳನ್ನು ಮತ್ತು ಅನುದಾನಿತ ಶ್ರೀ ಸುಬ್ರಹ್ಮಣ್ಯ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರವನ್ನು ವಿತರಿಸಲಾಯಿತು.
ಗ್ರಾಮದ ಮೂರು ಅಂಗನವಾಡಿಯ ಮಕ್ಕಳಿಗೆ ಸ್ಕೂಲ್ ಬ್ಯಾಗ್ ಮತ್ತು ಗ್ರಾಮದ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆಯ ಪುಸ್ತಕಗಳನ್ನು ವಿತರಿಸಲಾಯಿತು. ಒಟ್ಟು 75 ಸಾವಿರ ರೂ. ಮೌಲ್ಯದ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಹಿಳಾ ಮಂಡಲದ ಉಪಾಧ್ಯಕ್ಷರಾದ ವಿಮಲಾ ಶೆಟ್ಟಿಗಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರುಯುವಕ ಸಂಘದ ಅಧ್ಯಕ್ಷರಾದ ಶೇಖರ್ ಶೆಟ್ಟಿಗಾರ್ ಸ್ವಾಗತಿಸಿ, ವಿನೋದಾ ಭಟ್ ವಂದಿಸಿದರು.ಹೇಮನಾಥ ಅಮೀನ್ ಕಾರ್ಯಕ್ರಮ ನಿರೂಪಿಸಿದರು