ಮುಲ್ಕಿ: ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಮಂಗಳೂರು. ತಾಲೂಕು ಮತ್ತು ಜಿಲ್ಲಾ ಯುವ ಜನ ಒಕ್ಕೂಟ ದ.ಕ ಜಿಲ್ಲೆ ಇವರುಗಳ ಮಾರ್ಗದರ್ಶನದಲ್ಲಿ ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ 2021 ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಫೋರ್ಟ್ಸ್ ಕ್ಲಬ್ (ರಿ)ತೋಕೂರು,ಹಳೆಯಂಗಡಿ.ಇದರ ಆಶ್ರಯದಲ್ಲಿ ಜೂ.25 ರವಿವಾರ , ಬೆಳಿಗ್ಗೆ:9:00 ರಿಂದ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ -2023 ಸ್ಫೋರ್ಟ್ಸ್ ಕ್ಲಬ್ ಸಭಾಂಗಣದಲ್ಲಿ ಜರುಗಿತು.
ಹಾಲು ಉತ್ಪಾದಕರ ಸಹಕಾರಿ ಸಂಘ (ರಿ)ಅತಿಕಾರಿಬೆಟ್ಟು, ಇದರ ಅಧ್ಯಕ್ಷರಾದ ಗಂಗಾಧರ್ ಶೆಟ್ಟಿ, ಬರ್ಕೆತೋಟ ಇವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶಿಕ್ಷಣಕ್ಕೆ ಪ್ರಾಧಾನ್ಯತೆ ನೀಡುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ಈ ಕಾರ್ಯಕ್ರಮವು ಶ್ಲಾಘನೀಯ ಎಂದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ ಸಾಯಿ ಸ್ಟೀಲ್ಸ್ & ಸಿಮೆಂಟ್, ಹಳೆಯಂಗಡಿ ಇದರ ಮಾಲಕರಾದ ದೇವದಾಸ್ ಕುಳಾಯಿ ಮಾತನಾಡಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವಲ್ಲಿ ಕೇವಲ ಪಾಲಕರು ಮಾತ್ರವಲ್ಲದೆ ಸಂಘ ಸಂಸ್ಥೆಗಳು ಕೂಡ ಸಹಕಾರ ನೀಡಿದಲ್ಲಿ ಮಕ್ಕಳು ಸತ್ಪ್ರಜೆಗಳಾಗಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವಲ್ಲಿ ಎರಡು ಮಾತಿಲ್ಲ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಪ್ರಬಂಧಕರಾದ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ವಿದ್ಯಾವಂತ ಪ್ರಜೆಗಳಾಗಿ ದೇಶವನ್ನು ಮುನ್ನಡೆಸಬೇಕು ಎಂದು ಕರೆ ನೀಡಿದರು.
ಆನಂತರ 60 ಮಕ್ಕಳಿಗೆ ವಿದ್ಯಾನಿಧಿಯನ್ನು ವಿತರಿಸಲಾಯಿತು . ಈ ಸಂದರ್ಭದಲ್ಲಿ ಕ್ಲಬ್ ನ ಗೌರವಾಧ್ಯಕ್ಷರಾದ ಶ್ರೀ ಮೋಹನ್ ದಾಸ್, ಅಧ್ಯಕ್ಷರಾದ ಶ್ರೀ ಸಂತೋಷ್ ದೇವಾಡಿಗ, ಮಹಿಳಾ ಕಾರ್ಯಾಧ್ಯಕ್ಷೆ ಶ್ರೀಮತಿ ಶೋಭಾ.ವಿ.ಅಂಚನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತೋಕೂರು ಇಲ್ಲಿನ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಯೋಗೀಶ್ ಕೋಟ್ಯಾನ್, ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್, ಮೂಲ್ಕಿ ಚುಟುಕು ಸಾಹಿತ್ಯ ಪರಿಷತ್ ಇದರ ಅಧ್ಯಕ್ಷರಾದ ನರೇಂದ್ರ ಕೆರೆಕಾಡು,ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು, ಸದಸ್ಯೆಯರು, ವಿದ್ಯಾರ್ಥಿಗಳು,ಗ್ರಾಮಸ್ಥರು, ಹಾಗೂ ಮತ್ತಿತರರು ಪಾಲ್ಗೊಂಡರು.
ಮಹಿಳಾ ಸದಸ್ಯೆಯರಾದ ಶ್ರೀಮತಿ ಅರ್ಚನಾ ಮಹೇಶ್ ಮತ್ತು ಶ್ರೀಮತಿ ಪ್ರಮೀಳಾ ಹರೀಶ್ ಪ್ರಾರ್ಥಿಸಿದರು.
ಅಧ್ಯಕ್ಷರಾದ ಸಂತೋಷ್ ದೇವಾಡಿಗ ಸ್ವಾಗತಿಸಿದರು.
ಕೋಶಾಧಿಕಾರಿ ಸಂಪತ್ ದೇವಾಡಿಗ, ಮಹಿಳಾ ಸದಸ್ಯೆಯರಾದ ಶ್ರೀಮತಿ ವಾಣಿ ಮಹೇಶ್, ಶ್ರೀಮತಿ ಸುರೇಖಾ ವಿದ್ಯಾರ್ಥಿಗಳ ಪಟ್ಟಿಯನ್ನು ವಾಚಿಸಿದರು.ಪ್ರಧಾನ ಕಾರ್ಯದರ್ಶಿ ಜಗದೀಶ್ ಕುಲಾಲ್ ವಂದಿಸಿದರು.
ಕಾರ್ಯಾಧ್ಯಕ್ಷ ಶ್ರೀ ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು