Share this news

ಕಾರ್ಕಳ:ರಾಜ್ಯದ ವಿವಿಧ ತಾಲೂಕು ಹಾಗೂ ಜಿಲ್ಲಾಸ್ಪತ್ರೆಗಳಲ್ಲಿನ 167 ಡಯಾಲಿಸಿಸ್ ಕೇಂದ್ರಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 900 ಸಿಬ್ಬಂದಿಗಳು ವೇತನ ಹಾಗೂ ಇನ್ನಿತರ ಸೌಲಭ್ಯಗಳಿಗೆ ಆಗ್ರಹಿಸಿ ರಾಜ್ಯಾದ್ಯಂತ ಸೋಮವಾರದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ನಡೆಸಲು ತೀರ್ಮಾನಿಸಿರುವ ಹಿನ್ನಲೆಯಲ್ಲಿ ಬಡ ರೋಗಿಗಳು ಚಿಕಿತ್ಸೆಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.


ಕಾರ್ಕಳ ಸಾರ್ವಜನಿಕ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ಒಟ್ಟು 5 ಜನ ಸಿಬ್ಬಂದಿಗಳು ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯನಿರ್ವಹಿಸುತ್ತಿದ್ದು ಅವರು ಪ್ರತಿಭಟನೆಯಲ್ಲಿ ಪಾಲ್ಗೊಂಡಲ್ಲಿ ಕಾರ್ಕಳದ ಡಯಾಲಿಸಿಸ್ ಕೇಂದ್ರದಲ್ಲಿ ಪ್ರತೀದಿನ ಡಯಾಲಿಸಿಸ್ ಮಾಡಿಸಿಕೊಳ್ಳುವ ಸುಮಾರು 15 ರಿಂದ 20 ರೋಗಿಗಳಿಗೆ ತುಂಬಾ ತೊಂದರೆಯಾಗಲಿದೆ.


ಆದ್ದರಿಂದ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರ ಸೇರಿದಂತೆ ಉಡುಪಿ ಜಿಲ್ಲಾ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಲ್ಲಿರುವ ಡಯಾಲಿಸಿಸ್ ಕೇಂದ್ರದಲ್ಲಿ ರೋಗಿಗಳಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಸೂಕ್ತ ಚಿಕಿತ್ಸೆ ದೊರಕಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ

Leave a Reply

Your email address will not be published. Required fields are marked *