ಉಡುಪಿ: ನಶಾ ಮುಕ್ತ ಭಾರತ ಅಭಿಯಾನ ಯೋಜನೆಯಡಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವ್ಯಸನದ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯಾಗಾರವು ಮಣಿಪಾಲ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜೂನ್ 26ರಂದು ನಡೆಯಿತು.
ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೋಲಿಸ್ ಇಲಾಖೆ,ಸಾರ್ವಜನಿಕ ಶಿಕ್ಷಣ ಇಲಾಖೆ,ಉಡುಪಿ ಜಿಲ್ಲಾಸ್ಪತ್ರೆ, ಡಾ| ಎ.ವಿ ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ, ಕಮಲ ಎ ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬಯಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ ಮತ್ತು ಮಣಿಪಾಲ ಮಹಿಳಾ ಸಮಾಜ ಮಣಿಪಾಲ ಇವರ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ನಶಾ ಮುಕ್ತ ಭಾರತ ಅಭಿಯಾನ ಮಾದಕ ವ್ಯಸನದ ವಿರುದ್ಧ ಪ್ರಮಾಣವಚನ ಬೋಧಿಸಲಾಯಿತು.
ಈ ಸಂದರ್ಭದಲ್ಲಿಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಹಾಕೇ, ಉಡುಪಿ ಡಿಡಿಪಿಯು ಮಾರುತಿ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ರೋಶನ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ನಾಗಭೂಷನ್ ಉಡುಪ ಹೆಚ್, ಉಡುಪಿ ಡಾ. ಎ.ವಿ ಬಾಳಿಗಾ ಸ್ಮಾರಕ ಆಸ್ಪತ್ರೆಯ ನಿರ್ದೇಶಕ ಡಾ| ಪಿ.ವಿ ಭಂಡಾರಿ,ಕೆ.ಎA.ಸಿ ಮಣಿಪಾಲದ ನೇತ್ರ ತಜ್ಞೆ ಡಾ| ಸುಲತಾ ವಿ ಭಂಡಾರಿ,ಉಡುಪಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ| ಲತಾ ನಾಯಕ್ ಮುಂತಾದವರು ಉಪಸ್ಥಿತರಿದ್ದರು
ಕಾರ್ಯಾಗಾರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಡಾ. ಮನು ಆನಂದ್, ಮನೋಶಾಸ್ತ್ರಜ್ಞ ಡಾ. ವಾಸುದೇವ್ ಎಸ್, ಮನೋಶಾಸ್ತ್ರಜ್ಞ ಜಿಲ್ಲಾಸ್ಪತ್ರೆ ಅಜ್ಜರಕಾಡು ಉಡುಪಿ, ಡಾ| ವಿನೋದ್ ಚಂದ್ರಕಾAತ್ ನಾಯಕ್, ಪ್ರಾಧ್ಯಾಪಕರು, ಡಿಪಾರ್ಟ್ ಮೆಂಟ್ ಆಫ್ ಫಾರೆನ್ಸಿಕ್ ಮೆಡಿಸಿನ್, ಡಾ. ಪಿ.ವಿ ಭಂಡಾರಿ, ಮನೋಶಾಸ್ತ್ರಜ್ಞರು, ಮತ್ತು ನಿರ್ದೇಶಕರು, ಡಾ| ಎ.ವಿ ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ ಹಾಗೂ ಡಾ. ದೀಪಕ್ ಮಲ್ಯ, ಮನೋಶಾಸ್ತ್ರಜ್ಞರು, ಡಾ| ಎ.ವಿ ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ ಇವರಿಂದ ಮಾದಕ ದ್ರವ್ಯ ಸೇವನೆಯಿಂದ ಮಾನಸಿಕ ಹಾಗೂ ದೇಹಕ್ಕೆ ಆಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಸುಮಾರು 200 ಕ್ಕೂ ಅಧಿಕ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಹಾಜರಿದ್ದರು