ಬೆಳ್ತಂಗಡಿ : ಲಾಯಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿಯಲ್ಲಿ ರಾಜಕೇಸರಿ ಸಂಘಟನೆಯ ಗೌರವ ಸಲಹೆಗಾರ ಪ್ರೇಮ್ ರಾಜ್ ರೋಶನ್ ಸಿಕ್ವೇರಾ ಇವರ ಹುಟ್ಟು ಹಬ್ಬದ ಪ್ರಯುಕ್ತ ರಾಜಕೇಸರಿ ಸಂಘಟನೆಯ 540ನೇ ಸೇವಾ ಕಾರ್ಯಕ್ರಮದ ಅಂಗವಾಗಿ ಬಡ ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ ಕಾರ್ಯಕ್ರಮವು ಸೋಮವಾರ ಲಾಯಿಲದ ಕರ್ನೋಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ ಬೆನೆಡಿಕ್ಟ ಸಲ್ಡಾನ ವಹಿಸಿದ್ದರು. ವೇದಿಕೆಯಲ್ಲಿ ಗ್ರಾ.ಪಂ ಸದಸ್ಯರಾದ ಪ್ರಸಾದ್ ಶೆಟ್ಟಿ ಎಣಿಂಜೆ , ಶ್ರೀಯುತ ಮಹೇಶ. ಕೆ, ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ರಿ ನ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ, ಪ್ರೇಮ್ ರಾಜ್ ರೋಶನ್ ಸಿಕ್ವೇರಾ ಮತ್ತು ಶಾಲಾ ಮುಖ್ಯೋಪಾಧ್ಯಾಯರು ಜಗನ್ನಾಥ ಎಮ್ ರವರು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯ ಜಗನ್ನಾಥ,ಎಂ ಸ್ವಾಗತಿಸಿ, ಶಿಕ್ಷಕ ಕೃಷ್ಣ ಕುಮಾರ್ ಧನ್ಯವಾದವಿತ್ತರು. ಶಿಕ್ಷಕಿ ಉಷಾ .ಕೆ ಕಾರ್ಯಕ್ರಮ ನಿರೂಪಿಸಿದರು ಶಿಕ್ಷಕರು ಮತ್ತು ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು.