ಬೆಂಗಳೂರು:ರಾಜ್ಯದಲ್ಲಿ ಪೂರ್ಣಬಹುತದೊಂದಿಗೆ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಸರ್ಕಾರ ಇಂದಿನಿಂದ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಸಲಿದ್ದು, ಸರ್ಕಾರವನ್ನು ಹಣಿಯಲು ಪ್ರತಿಪಕ್ಷಗಳು ಸಜ್ಜಾಗಿವೆ.
ಈ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಮುಖ ವಿಧೇಯಕಗಳ ಮಂಡನೆ ಸೇರಿದಂತೆ ಬಜೆಟ್ ಮಂಡಿಸಲಿದ್ದಾರೆ.ಇದರ ಜತೆಗೆ ಗ್ಯಾರಂಟಿಗಳನ್ನೇ ಪ್ರಮುಖ ಅಸ್ತçವನ್ನಾಗಿಸಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮುಗಿಬೀಳಲಿದ್ದು ಈ ವಿಚಾರದಲ್ಲಿ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಲಿದೆ
ಇಂದಿನಿಂದ ಆರಂಭವಾಗಲಿರುವ ಅಧಿವೇಶನವು ಜುಲೈ.14ರವರೆಗೆ ನಡೆಯಲಿದ್ದು,ಕಲಾಪದ ಮೊದಲ ದಿನವಾದ ಇಂದು ಮಧ್ಯಾಹ್ನ 12 ಗಂಟೆಗೆ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡಲಿದ್ದಾರೆ.
ಹೊಸ ಸರ್ಕಾರದ ಮೊದಲ ಅಧಿವೇಶನದಲ್ಲಿ Pಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಕೈಗೊಂಡAತ ಮತಾಂತರ ನಿಷೇಧ ಕಾಯ್ದೆ ರದ್ದು, ಗೋಹತ್ಯೆ ನಿಷೇಧ ಕಾಯ್ದೆ ವಾಪಾಸ್ ಸೇರಿದಂತೆ ವಿವಿದ ಮಸೂದೆಗಳನ್ನು ಮಂಡಿಸಿ ಸರ್ಕಾರ ಅಂಗೀಕಾರ ಪಡೆಯುವ ನಿರೀಕ್ಷೆಯಿದೆ.ಆದರೆ ಈ ಕಾಯ್ದೆಗಳನ್ನು ವಾಪಾಸು ಪಡೆಯುವ ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಹೋರಾಟಕ್ಕೆ ಸಜ್ಜಾಗಿದೆ. ಮತಾಂತರ ನಿಷೇಧ ಕಾಯ್ದೆಯಿಂದ ಬಲವಂತದ ಹಾಗೂ ಆಮಿಷದ ಮತಾಂತರಕ್ಕೆ ಕಡಿವಾಣ ಹಾಕಲು ಸಾಧ್ಯವಾಗಿದೆ ಆದರೆ ಕಾಂಗ್ರೆಸ್ ಪರೋಕ್ಷವಾಗಿ ಮತಾಂತರಕ್ಕೆ ಬೆಂಬಲಿಸುವAತಿದೆ ಎಂದು ಈ ಹಿಂದೆ ಬಿಜೆಪಿ ಆರೋಪಿಸಿತ್ತು, ಇದರ ಜತೆಗೆ ಗೋಹತ್ಯೆ ನಿಷೇಧ ಕಾಯಿದೆ ವಾಪಾಸ್ ಪಡೆಯುವ ವಿಚಾರವು ಸದನದಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಗುವ ಸಾಧ್ಯತೆಯೂ ದಟ್ಟವಾಗಿದೆ.
ಒಟ್ಟಿನಲ್ಲಿ ಮುಂದಿನ 10 ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಲು ಬಿಜೆಪಿ ಹಾಗೂ ಜೆಡಿಎಸ್ ಈಗಾಗಲೇ ಸಿದ್ಧತೆ ನಡೆಸಿಕೊಂಡಿದ್ದು ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದನ್ನು ಹೇಗೆ ಎದುರಿಸಲಿದೆ ಎನ್ನುವುದನ್ನು ಕಾದುನೋಡಬೇಕಿದೆ