ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ನಡೆದಿದ್ದ ಬಿಟ್ ಕಾಯಿನ್ ಹಗರಣ ಪ್ರಕರಣವನ್ನು ಮರು ತನಿಖೆಗೆ ಸಿದ್ದರಾಮಯ್ಯ ಸರ್ಕಾರ ಆದೇಶಿಸಿದೆ. ಕಾಟನ್ ಪೇಟೆ ಬಿಟ್ ಕಾಯಿನ್ ಪ್ರಕರಣವನ್ನು ಮರುತನಿಖೆಗೆ ಸಿಐಡಿಗೆ ವರ್ಗಾವಣೆ ಇಂದು(ಜುಲೈ 03) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ನಾವು ಹಿಂದೆ ಬಿಜೆಪಿ ಸರ್ಕಾರದ ಬಿಟ್ ಕಾಯಿನ್ ವಿಚಾರದಲ್ಲಿ ಲಕ್ಷಾಂತರ ಕೋಟಿ ರೂಪಾಯಿಗಳ ಬಗ್ಗೆ ಮಾತನಾಡಿದ್ದೆವು. ಈಗ ಬಿಚ್ ಕಾಯಿನ್ ಪ್ರಕರಣ ಮರು ತನಿಖೆಗೆ ಅದೇಶಿಸಿದ್ದೇವೆ. ಸಿಐಡಿ ಅಡಿಯಲ್ಲಿ ಎಸ್ಐಟಿ ರಚನೆ ಮಾಡಿದ್ದೇನೆ. ಸರ್ಕಾರದ ರಿಲೆಟೆಡ್ ಆದೇಶಗಳನ್ನ ಮಾಡುತ್ತೇವೆ. ಟೆಕ್ನಿಕಲ್ , ಅಂತರ್ ರಾಜ್ಯ, ಅಂತಾರಾಷ್ಟ್ರ ಇರುವುದಿರಂದ ನಿಗದಿತ ಸಮಯದಲ್ಲಿ ಮುಗಿಯಲಿದೆ ಎಂದು ಹೇಳುವಂತಿಲ್ಲ ಎಂದು ಸ್ಪಷ್ಟಪಡಿಸಿದರು.
2020ರಲ್ಲಿ ಬಿಟ್ ಕಾಯಿನ್ ಹಗರಣ ಸಂಬAಧ ಬೆಂಗಳೂರಿನ ಕಾಟನ್ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳು ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ವಿಶೇಷ ತಂಡ ರಚಿಸಿ ಹೆಚ್ಚಿನ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಅವರು ಸಿಐಡಿ ಡಿಜಿಪಿ ಎಂ.ಎ.ಸಲೀA ಅವರಿಗೆ ಪತ್ರ ಬರೆದಿದ್ದರು.
ಈ ಪ್ರಕರಣದಲ್ಲಿ ಹಲವು ಬಿಜೆಪಿ ನಾಯಕರ ಕೈವಾಡವಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದ್ದು, ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿತ್ತು. ಆರೋಪಿಗಳು ರಾಜ್ಯ ಸರ್ಕಾರದ ಇ-ಪೋರ್ಟಲ್ ವೆಬ್ಸೈಟ್ ಅನ್ನು ಹ್ಯಾಕ್ ಮಾಡುವ ಮೂಲಕ 11.5 ಕೋಟಿ ರೂ. ಆರೋಪಿಗಳಲ್ಲಿ ಒಬ್ಬನಾದ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿಯನ್ನು ಬಂಧನವಾಗಿತ್ತು. ಬಳಿಕ ಆರೋಪಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.