Share this news

ಧರ್ಮಸ್ಥಳ: ಚಿತ್ರದುರ್ಗದ ಮುರುಘಾಶ್ರೀ ಪ್ರಕರಣ ಬಯಲು ಮಾಡಿದ್ದ ಮೈಸೂರಿನ ಒಡನಾಡಿ ಸಂಸ್ಥೆ ಇದೀಗ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬAಧ ಹೋರಾಟಕ್ಕೆ ಮುಂದಾಗಿದೆ.

ಸೌಜನ್ಯ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಕುಟುಂಬಕ್ಕೆ ನ್ಯಾಯ ಕೊಡಿಸಲು ಒಡನಾಡಿ ಸಂಸ್ಥೆ ಹೋರಾಟಕ್ಕೆ ಇಳಿಯುತ್ತಿದ್ದಂತೆ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ನಿನ್ನೆ ಸೌಜನ್ಯ ಪರ ಹೋರಾಟಗಾರರನ್ನ ಭೇಟಿಯಾದ ಒಡನಾಡಿಯ ಮುಖಂಡರು ಸೌಜನ್ಯ ಪರವಾದ ನ್ಯಾಯದ ಹೋರಾಟಕ್ಕೆ ಒಡನಾಡಿ ಬೆಂಬಲಿಸುತ್ತದೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ ಎಂದು ಭರವಸೆ ನೀಡಿದೆ. ಸಂತೋಷ್ ರಾವ್ ಆರೋಪಿಯಲ್ಲ ಎಂದು ಸಾಬೀತಾದ ಹಿನ್ನಲೆ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿರುವ ಪಡೆದುಕೊಂಡಿರುವ ಸೌಜನ್ಯ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ.

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಸಂಬAಧ ಒಡನಾಡಿ ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಸ್ಟಾನ್ಲಿ ಪ್ರತಿಕ್ರಿಯೆ ನೀಡಿದ್ದು, ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಪ್ರಕರಣ ತಲೆ ತಗ್ಗಿಸುವಂತಹ ಘಟನೆ. ಅತ್ಯಾಚಾರ ಮಾಡಿದ ಪಾಪಿಗಳನ್ನ ಇನ್ನೂ ನ್ಯಾಯದ ಕಟಕಟೆಗೆ ತರುವುದಕ್ಕೆ ದೇಶದ ಕಾನೂನಿಗೆ ಸಾಧ್ಯವಾಗಿಲ್ಲ ಎಂಬುವುದು ನಗೆ ಪಾಟಿಲಿನ ಸಂಗತಿ ಎಂದರು. ಸಿಬಿಐ ಘನತೆಯನ್ನ ಉಳ್ಳಿಸಿಕೊಳ್ಳುವ ನಿಟ್ಟಿನಲ್ಲಿ ಮತ್ತೆ ಮರು ತನಿಖೆಯಾಗಬೇಕು ಎಂದು ಆಗ್ರಹಿಸಿರುವ ಸ್ಟ್ಯಾನ್ಲಿ, ಈ ಪ್ರಕರಣದಲ್ಲಿ ನ್ಯಾಯ ಸಿಗುವವರೆಗೂ ನಾವು ಈ ಹೋರಾಟದಲ್ಲಿ ಕೈ ಜೋಡಿಸುತ್ತಿದ್ದೇವೆ ಎಂದರು.

ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಇದರ ಬಗ್ಗೆ ಹೆಚ್ಚು ಮಾತನಾಡಬೇಕು. ಸಾಮಾಜಿಕ ಜವಾಬ್ದಾರಿ ಅನುಶಾಸನ ಬದ್ಧವಾದ ಹೊಣೆಗಾರಿಕೆ ಹೊತ್ತವರು ತಮ್ಮ ಮನೆ ಬಾಗಿಲಲ್ಲಿರುವಂತಹ ತಮ್ಮ ಮನೆಯ ಮಗುವಿನ ಮೇಲಾಗಿರುವ ಅತ್ಯಾಚಾರದ ಬಗ್ಗೆ ಮೌನವಾಗಿರಬಾರದು. ಆ ಮಗುವಿನ ಕುಟುಂಬಕ್ಕೆ ಸಾಂತ್ವನ ಹೇಳುವುದು ಅವರ ಕರ್ತವ್ಯವಾಗಿದೆ ಎಂದರು.

Leave a Reply

Your email address will not be published. Required fields are marked *