ಕಾರ್ಕಳ:ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಡಾರು ಮುಡ್ರಾಲು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮುಡ್ರಾಲಿನ ವೈಪಾಲು ಎಂಬಲ್ಲಿನ ನಿವಾಸಿ ಪ್ರವೀಣ್ ಭಂಡಾರಿಯವರ ಪತ್ನಿ ಭವ್ಯಾ(32) ಎಂಬವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರಿಗೆ ಇಬ್ಬರು ಮಕ್ಕಳಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ