ಉಡುಪಿ: ಸಮುದ್ರಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಹಿನ್ನಲೆ ಮುಂದಿನ ಐದು ದಿನಗಳವರೆಗೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್.ಎಂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.ಅದರಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಇಂದು ಕಾರಾವಳಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿ ರೆಡ್ ಅಲರ್ಟ್ ನೀಡಿದ್ದು, 20 ಸೆಂ ಮೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನು ಉತ್ತರ ಒಳನಾಡಿಗೆ ಯಲ್ಲೋ ಅಲರ್ಟ್ ನೀಡಿದ್ದು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ರಾಯಚೂರಿಗೆ ಮಳೆ ಅಲರ್ಟ್ ನೀಡಲಾಗಿದೆ.
ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಂತರ ಜಿಲ್ಲೆಗೆ ಇನ್ನು ಐದು ದಿನ ಭಾರಿ ಮಳೆ ಅಲರ್ಟ್ ನೀಡಿದ್ದು, ತಗ್ಗು ಪ್ರದೇಶದ ಜನರು ಹಾಗೂ ರಾಜಕಾಲುವೆ ಅಕ್ಕಪಕ್ಕದಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರುವಂತೆ ಹವಮಾನ ಇಲಾಖೆ ಸೂಚನೆ ನೀಡಿದೆ.