Share this news

ಉಡುಪಿ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಜೆ. ಐ. ಸಿ. ಇ. ಐಎಎಸ್ ಅಕಾಡೆಮಿ ಬೆಂಗಳೂರು ಇವರ ಸಹಯೋಗದಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಕೆ.ಎ.ಎಸ್ ಹಾಗೂ ಐ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಸಿದ್ಧತೆಯ ಕುರಿತ ಮಾಹಿತಿ ಕಾರ್ಯಾಗಾರವು ಭಾನುವಾರ ಉಡುಪಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆಯಿತು
ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಕಾರ್ಯಾಗಾರವನ್ನು ಉದ್ಘಾಟಿಸಿ ಶಿಬಿರಾರ್ಥಿಗಳಿಗೆ ಶುಭ ಕೋರಿದರು.


ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ, ಉಡುಪಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್ ಉಪಸ್ಥಿತರಿದ್ದರು.


ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿಜಯಪುರ ಗೆಜ್ಜಿ ಕೆರಿಯರ್ ಅಕಾಡೆಮಿ ಸಂಸ್ಥಾಪಕ ಸುರೇಶ್ ಬಿ ಗೆಜ್ಜೆ, ಬಾಗಲಕೋಟೆ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ವೈ.ಎಸ್ ಸಿಂಗಣ್ಣನವರ್, ಶ್ರೀಧರ್ ಗೋಟುರು ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ನೀಡಿದರು.

Leave a Reply

Your email address will not be published. Required fields are marked *