ಉಡುಪಿ:ಈ ಬಾರಿಯ ವಿಧಾನಮಂಡಲ ಅಧಿವೇಶನದಲ್ಲಿ ಮತಾಂತರ ನಿಷೇಧ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಪಡಿಸುವ ವಿಧೇಯಕವನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ಮಂಡಿಸುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಎಲ್ಲಾ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಈ ಕಾಯಿದೆಗಳನ್ನು ತಿದ್ದುಪಡಿ ಅಥವಾ ಹಿಂಪಡೆಯದಂತೆ ವಿಧಾನಸಭೆಯಲ್ಲಿ ಆಗ್ರಹಿಸಬೇಕೆಂದು ಒತ್ತಾಯಿಸಿ ಭಜರಂಗದಳ ಹಾಗೂ ಹಿಂ.ಜಾ.ವೇ ಸಂಘಟನೆಗಳ ಸದಸ್ಯರು ಕರಾವಳಿ ಭಾಗದ ಶಾಸಕರುಗಳಿಗೆ ಮನವಿಪತ್ರ ನೀಡಿದರು.

ಈ ಸಂದರ್ಭದಲ್ಲಿ ಬಜರಂಗದಳ ದಕ್ಷಿಣ ಪ್ರಾಂತ ಸಂಯೋಜಕ ಸುನಿಲ್ ಕೆ ಆರ್, ಹಿಂಜಾವೇ ಉಡುಪಿ ಜಿಲ್ಲಾ ಸಂಯೋಜಕ ಉಮೇಶ್ ಸೂಡ, ಸಹ ಸಂಯೋಜಕ ರಾಜೇಶ್ ಉಚ್ಚಿಲ, ರಾಘವೇಂದ್ರ ಸಾಣೂರು, ಚೇತನ್ ಪೇರಲ್ಕೆ, ಮನೋಜ್ ಕರಿಯಕಲ್ಲು, ಸುಧೀರ್ ನಿಟ್ಟೆ ಮುಂತಾದವರು ಉಪಸಿತರಿದ್ದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮತಾಂತರ ನಿಷೇಧ ಕಾಯ್ದೆ ಹಾಗೂ ಗೋ ಹತ್ಯ ನಿಷೇಧ ಕಾಯ್ದೆಯನ್ನು ರದ್ದು ಪಡಿಸುವುದಾಗಿ ಹೇಳಿತು. ಸರಕಾರದ ಈ ನಿರ್ಧಾರದ ವಿರುದ್ಧ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಹೋರಾಟದ ಎಚ್ಚರಿಕೆ ನೀಡಿವೆ. ಇದಲ್ಲದೇ ಈ ಉದ್ದೇಶಿತ ಕಾಯ್ದೆಗಳನ್ನು ರದ್ದುಪಡಿಸುವ ವಿಚಾರದಲ್ಲಿ ವಿರೋಧಿಸುವಂತೆ ಕೋರಿ ಕಾಂಗ್ರೆಸ್ ಶಾಸಕರಿಗೂ ಮನವಿ ಸಲ್ಲಿಸಲಾಗಿದೆ



