ಬೆಂಗಳೂರು: ಚುನಾವಣಾ ಪೂರ್ವದಲ್ಲಿ ನೀಡಿದ ಆಶ್ವಾಸನೆಯನ್ನು ಬಜೆಟ್ನಲ್ಲಿ ಈಡೇರಿಸದೇ ಮಾತು ತಪ್ಪಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು ಇಂದು ಹಲವೆಡೆ ಪ್ರತಿಭಟನೆ ನಡೆಸಿದರು.
ನಮಗೆ ಗೃಹಲಕ್ಷ್ಮೀ ಯೋಜನೆ ಬೇಡ ಗೌರವಧನ ಹೆಚ್ಚಿಸುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು, ಸರ್ಕಾರ ನೀಡಿರುವ ಮೊಬೈಲ್ ವಾಪಸ್ಸು ನೀಡಲು ಮುಂದಾಗಿದ್ದಾರೆ. ಈ ಬಾರಿ ಬಜೆಟ್ನಲ್ಲಿ ಸರ್ಕಾರ ಕೊಟ್ಟ ಆಶ್ವಾಸನೆ ಈಡೇರಿಸಿಲ್ಲ. ಗೌರವಧನದ ಕುರಿತು ಬಜೆಟ್ನಲ್ಲಿ ಪ್ರಸ್ತಾಪವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತೆಯರು ಕೈಯಲ್ಲಿ ಮೊಬೈಲ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಸರ್ಕಾರ ಕೊಟ್ಟ ಮೊಬೈಲ್ ಅನ್ನು ಸರ್ಕಾರವೇ ಹಿಂಪಡೆಯಲಿ ಎಂದು ಆಗ್ರಹಿಸಿದರು.