ಕಾರ್ಕಳ: ವಿಪರೀತ ಮದ್ಯಪಾನ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಹಾರ್ದೊಟ್ಟು ನಿವಾಸಿ ರವಿ ಶೆಟ್ಟಿ(55) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದು, ಶನಿವಾರ ಸಂಜೆ 6 ಗಂಟೆ ಸುಮಾರಿಗೆ ಮನೆಯ ಬಳಿ ವಾಂತಿ ಮಾಡುತ್ತಿದ್ದಾಗ ಅವರ ಪುತ್ರ ವೀರೇಶ್ ಎಂಬವರು ತಕ್ಷಣವೇ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ರವಿ ಶೆಟ್ಟಿ ಮೃತಪಟ್ಟಿದ್ದಾರೆ.
ರವಿ ಶೆಟ್ಟಿಯವರು ಕುಡಿತದ ಚಟದಿಂದ ಈ ಕೃತ್ಯ ಎಸಗಿದ್ದಾರೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.