ಮೂಡಬಿದಿರೆ : ಅರಣ್ಯ ಇಲಾಖೆ ಮೂಡಬಿದ್ರೆ, ಅರಣ್ಯ ವಿಭಾಗ ಕಡಂದಲೆ, ಹಾಲು ಉತ್ಪಾದಕರ ಸಹಕಾರಿ ಸಂಘ ಮಂಗಳೂರು, ಹಾಲು ಉತ್ಪಾದಕರ ಸಹಕಾರ ಸಂಘ ಕಡಂದಲೆ, ಜೆಸಿಐ ಮುಂಡ್ಕೂರು, ಲಯನ್ಸ್ ಕ್ಲಬ್ ಮುಂಡ್ಕೂರು ಕಡಂದಲೆ ಮತ್ತು ಶ್ರೀ ಸುಬ್ರಮಣ್ಯ ಸ್ವಾಮಿ ಹೈಸ್ಕೂಲು ಕಡಂದಲೆ ಇವರ ಜಂಟೀ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆ ಶಾಲಾ ಆವರಣದಲ್ಲಿ ಸಾಂಕೇತಿಕವಾಗಿ ಸಸಿಗಳನ್ನು ನೆಡಲಾಯಿತು.
ಈ ಸಂದರ್ಭದಲ್ಲಿ ಮೂಡಬಿದ್ರೆ ಅರಣ್ಯ ವಿಭಾಗದ ಅಧಿಕಾರಿಗಳಾದ ಹಿಮಗಿರಿ, ಸತೀಶ್, ಮಂಗಳೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಕೆಪಿ ಸುಚರಿತ ಶೆಟ್ಟಿ, ಕೆಎಂಎಫ್ ನ ಮಾರ್ಕೆಟಿಂಗ್ ಆಫೀಸರ್ ರವಿರಾಜ್ ಉಡುಪ, ಕಾರ್ಯನಿರ್ವಹಣಾಧಿಕಾರಿ ಸೌಂದರ್ಯ, ಪಾಲಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್, ಉಪಾಧ್ಯಕ್ಷ ಸುಕೇಶ್ ಶೆಟ್ಟಿ, ಕಾರ್ಯದರ್ಶಿ ಮೋಹಿನಿ, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಂದ್ರ ಭಟ್ ಕಡಂದಲೆ ಉಪಸ್ಥಿತರಿದ್ದರು.
ಶಾಲಾ ಸಂಚಾಲಕರಾದ ಸುದರ್ಶನ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಪ್ರಗತಿಪರ ಕೃಷಿಕರಿಗೆ ವಿವಿಧ ತಳಿಯ ಸಸಿಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು. ರಾಷ್ಟ್ರಮಟ್ಟದಲ್ಲಿ ಶೈಕ್ಷಣಿಕ ವರ್ಷದಲ್ಲಿ ಸಾಧನೆ ಮಾಡಿದ ಇಬ್ಬರು ವಿದ್ಯಾರ್ಥಿಗಳನ್ನು ಅರಣ್ಯ ಇಲಾಖೆ ವತಿಯಿಂದ ಗೌರವಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕ ದಿನಕರ್ ಕುಂಭಾಶಿ ಸ್ವಾಗತಿಸಿ, ಶಿಕ್ಷಕ ಸುಧಾಕರ್ ರ್ಪೊಸ್ರಾಲ್ ಕಾರ್ಯಕ್ರಮ ನಿರೂಪಿಸಿದರು. ಅರಣ್ಯ ಇಲಾಖೆಯ ಅಧಿಕಾರಿ ಅಶ್ವತ್ ಗಟ್ಟಿ ವಂದಿಸಿದರು.