ವಾರಾಣಸಿ: ವಾರಣಾಸಿ ದೇಗುಲದ ಜಾಗದಲ್ಲಿ ಮಸೀದಿ ನಿರ್ಮಿಸಲಾಗಿದೆ ಎಂಬ ಹಿಂದೂ ಭಕ್ತರ ವಾದ ಸತ್ಯಾಸತ್ಯತೆ ಪರೀಕ್ಷಿಸುವ ಸಲುವಾಗಿ ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಗ್ಯಾನವಾಪಿ ಮಸೀದಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸಮೀಕ್ಷೆ ನಡೆಸುತ್ತಿದೆ. ಅಧಿಕಾರಿಗಳು ಪ್ರವೇಶಿಸುತ್ತಿದ್ದಂತೆಯೇ ಯುಪಿ ಪೊಲೀಸ್ ತಂಡವು ಗ್ಯಾನವಾಪಿ ಮಸೀದಿ ಸುತ್ತ ಬಿಗಿ ಭದ್ರತೆ ಕೈಗೊಂಡಿದೆ.
ಇAದು ಮುಂಜಾನೆ 7 ಗಂಟೆಗೆ ಗ್ಯಾನವಾಪಿ ಮಸೀದಿಯನ್ನು ತಲುಪಿದ ಪುರಾತತ್ವ ಇಲಾಖೆಯ ತಂಡ ವೈಜ್ಞಾನಿಕ ಸಮೀಕ್ಷೆಯನ್ನು ನಡೆಸುತ್ತಿದೆ. ಈ ವಿಷಯಕ್ಕೆ ಸಂಬAಧಿಸಿದAತೆ ಭಾನುವಾರ ವಾರಾಣಸಿ ಕಮಿಷನರ್ ಅವರನ್ನು ಭೇಟಿ ಮಾಡಿ ಪುರಾತತ್ವ ಇಲಾಖೆ ಮಾತುಕತೆ ನಡೆಸಿತ್ತು. ಸಮೀಕ್ಷೆ ಹಿನ್ನೆಲೆಯಲ್ಲಿ ಮಸೀದಿಗೆ ಹಾಗೂ ಮಸೀದಿ ಸುತ್ತಮುತ್ತ ಭಾರಿ ಭದ್ರತೆಯನ್ನು ಒದಗಿಸಲಾಗಿದೆ.