ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆಯೂ ( ಜುಲೈ 27) ರಜೆ ಮುಂದುವರಿಸಿ ಉಡುಪಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ರಜೆ ಮುಂದುವರಿಸಿ ಆದೇಶ ಹೊರಡಿಸಿದ್ದಾರೆ.
ಭಾರೀ ಗಾಳಿಮಳೆಯ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ಸೃಷ್ಟಿಯಾಗಿದ್ದು ಮೀನುಗಾರರು ಕಡಲಿಗೆ ಇಳಿಯದಂತೆ ಹಾಗೂ ಪ್ರವಾಸಿಗರು ಸಮುದ್ರ ತೀರಕ್ಕೆ ತೆರಳದಂತೆ ಡಿಸಿ ಎಚ್ಚರಿಕೆ ನೀಡಿದ್ದಾರೆ.