ಕಾರ್ಕಳ : ಪ್ರತ್ಯೇಕ ಪ್ರಕರಣದಲ್ಲಿ ಕಾರ್ಕಳ ಮತ್ತು ಹೆಬ್ರಿ ತಾಲೂಕಿನಲ್ಲಿ ಇಬ್ಬರು ವ್ಯಕ್ತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾರ್ಕಳ ತಾಲೂಕಿನ ಕುಕ್ಕುಜೆ ಗ್ರಾಮದ ದೊಂಡೇರಂಗಡಿ ಎಂಬಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊರಗಪ್ಪ ಪೂಜಾರಿ(49ವ) ಆತ್ಮಹತ್ಯೆ ಮಾಡಿಕೊಂಡವರು. ಅವರು ಮುಂಬೈನಲ್ಲಿ ವ್ಯವಹಾರ ಮಾಡಿಕೊಂಡು ಅಲ್ಲಿಯೇ ವಾಸವಿದ್ದರು. ವ್ಯವಹಾರದಲ್ಲಿ ನಷ್ಟ ಹೊಂದಿದ ಕಾರಣ ಜುಲೈ.25 ರಂದು ಪತ್ನಿಯ ತಂಗಿಯ ಗಂಡನ ಮನೆಯಾದ ದೊಂಡೇರಂಗಡಿಗೆ ಬಂದಿದ್ದವರು ಜು.26 ರಂದು ರಾತ್ರಿ ಮನೆಯ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ರಿ ಗ್ರಾಮದ ಶಿವಪುರ ಎಂಬಲ್ಲಿ ರಂಗನಾಥ ಶೆಟ್ಟಿ (33) ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಶಿವಪುರ ಗ್ರಾಮದ ಮೇಲ್ ಮುಕ್ಕಾಣಿ ಎಂಬಲ್ಲಿ ಮನೆಯ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.