ತುಮಕೂರು : ತಾಯಿ ಮೊಬೈಲ್ ಚಾರ್ಜರ್ ಕೊಡಲಿಲ್ಲವೆಂದು ಮಗನೊಬ್ಬ ನೇಣಿಗೆ ಶರಣಾಗಿರುವ ದುರ್ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿಂಗರೆಡ್ಡಿಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ನಿಖಿಲ್ ಗೌಡ (18) ನೇಣಿಗೆ ಶರಣಾಗಿರುವ ಯುವಕ. ಅಶಾ ಕಾರ್ಯಕರ್ತೆಯಾಗಿರುವ ಲಕ್ಷ್ಮಮ್ಮ ಎಂಬಾಕೆಯ ಮಗ ನಿಖಿಲ್ ಗೌಡ ಪಾವಗಡ ಪಟ್ಟಣದ ಶಾಂತಿ ಎಸ್ಎಸ್ಕೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವಕ.
ಭಾನುವಾರ ರಜೆ ಇದ್ದ ಕಾರಣ ಮನೆಯಲ್ಲಿಯೇ ಇದ್ದ ನಿಖಿಲ್ ತಾಯಿ ಜತೆ ನನಗೆ ಅದು ಕೊಡಿಸಿಲ್ಲ, ಇದು ಕೊಡಿಸಿಲ್ಲ ಎಂದು ತಾಯಿ ಜತೆಗೆ ಗಲಾಟೆ ಮಾಡಿದ್ದ. ಇದೆಲ್ಲ ಆದ ಬಳಿಕ ಮೊಬೈಲ್ ಚಾರ್ಜರ್ ಕೊಡು ಎಂದ್ದಿದ್ದಾನೆ. ಆದರೆ ತಾಯಿ ನನ್ನ ಬಳಿ ಚಾರ್ಜರ್ ಇಲ್ಲ ಎಂದು ಹೇಳಿ ಬಳಿಕ ಹತ್ತಿರದ ಮನೆಯೊಂದರಲ್ಲಿ ಹೂ ಕಟ್ಟಲು ಹೋಗಿದ್ದರು. ಮನೆಗೆ ವಾಪಸ್ ಬಂದು ಬಾಗಿಲು ತೆರೆಯಲು ಪ್ರಯತ್ನಿಸಿದಾಗ ಒಳಗಡೆಯಿಂದ ಮನೆ ಬಾಗಿಲು ಲಾಕ್ ಆಗಿದೆ. ಬಾಗಿಲು ಬಡಿದಿದ್ದಾಳೆ. ಆದರೂ ಬಾಗಿಲು ತೆಗೆದಿಲ್ಲ. ಅನುಮಾನಗೊಂಡು ಸ್ಥಳೀಯರ ಸಹಾಯದಿಂದ ಬಾಗಿಲು ಒಡೆದು ನೋಡಿದಾಗ ಘಟನೆ ಬಯಲಿಗೆ ಬಂದಿದೆ.
ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ವೈ.ಎನ್.ಹೊಸಕೋಟೆ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಕ್ಕಳ ಮನಸ್ಸನ್ನು ಮೊಬೈಲ್ ಎಂಬ ಮಾಯೆ ಆವರಿಸಿಕೊಂಡಿದ್ದು ಮಕ್ಕಳು ಸಣ್ಣಪುಟ್ಟ ವಿಚಾರಕ್ಕೆ ದುಡುಕಿನ ನಿರ್ಧಾರ ತೆಗೆದುಕೊಳ್ಳುತ್ತಿರುವುದು ನಿಜಕ್ಕೂ ಆತಂಕದ ವಿಚಾರ. ಈ ಬಗ್ಗೆ ಪೋಷಕರು ಎಚ್ಚೆತ್ತುಕೊಂಡು ಮಕ್ಕಳಿಗೆ ಮೊಬೈಲ್ನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕಿದೆ.