Share this news

ಬೆಳಗಾವಿ : ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರಿನಲ್ಲಿ ಪಶು ವೈದ್ಯಕೀಯ ಮಹಾವಿದ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜಿಡಿಪಿ ಹೆಚ್ಚಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಥಣಿ ತಾಲೂಕಿನಲ್ಲಿ ಪಶು ವೈದ್ಯಕೀಯ ಮಹಾವಿದ್ಯಾಲಯ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಸಮಾರಂಭದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಯೊಂದು ಕುಟುಂಬಕ್ಕೆ ಐದು ಸಾವಿರ ರೂಪಾಯಿ ಲಭಿಸುತ್ತಿದೆ. ಇದರಿಂದ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಇದರಿಂದ ರಾಜ್ಯದ ಜಿಡಿಪಿ ಹೆಚ್ಚಾಗಲಿದೆ ಎಂದರು.

ಚುನಾವಣಾ ಸಂದರ್ಭದಲ್ಲಿ ನೀಡಲಾದ ಪ್ರತಿಯೊಂದು ಭರವಸೆಗಳನ್ನು ಸರ್ಕಾರ ಈಡೇರಿಸಲಿದೆ. ನುಡಿದಂತೆ ನಡೆಯುವ ಸರ್ಕಾರ ನಮ್ಮದು ಎಂದರು. ಕಳೆದ ಬಾರಿ 165 ಭರವಸೆಗಳ ಪೈಕಿ 158 ಈಡೇರಿಸಲಾಗಿದೆ. ಅದೇ ರೀತಿ ಈ ಸಲ ನೀಡಲಾಗಿರುವ ಐದು ಗ್ಯಾರಂಟಿ ಇತ್ತೀಚಿನ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಲಾದ 76 ಭರವಸೆಗಳನ್ನು ಈಡೇರಿಸಲು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿಯೇ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *