ಬೆಂಗಳೂರು : ತಡ ರಾತ್ರಿಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆಯಲ್ಲಿ ಜಯದೇವ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ನಂತರ ರಾಜಭವನಕ್ಕೆ ಮರಳಿದ್ದಾರೆ.
ಭಾನುವಾರ ರಾತ್ರಿ ಸುಮಾರು 10 ಗಂಟೆ ಹೃದಯ ಸಂಬಂಧಿ ಸಮಸ್ಯೆಯಿಂದ ಗೆಹ್ಲೋಟ್ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ರಾತ್ರಿ 10 ಗಂಟೆ ಸುಮಾರಿಗೆ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾದರು. ಆಸ್ಪತ್ರೆಯ ಡಿಲಕ್ಸ್ ವಾರ್ಡ್ ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆದ ಬಳಿಕ ಡಿಸ್ಚಾರ್ಜ್ ಆಗಿ ರಾಜಭವನಕ್ಕೆ ತೆರಳಿದರು. ರಾತ್ರಿ 10 ರಿಂದ 12:50 ರವರೆಗೆ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ರಾತ್ರಿ 12.50ಕ್ಕೆ ರಾಜ ಭವನಕ್ಕೆ ಮರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚೆಗೆ ವಯಸ್ಸಿನ ಅಂತರವಿಲ್ಲದೆ ಪ್ರತಿಯೊಬ್ಬರಲ್ಲೂ ಈ ಹೃದಯ ಸಂಬಂಧಿಸಿದ ಕಂಡುಬರುತ್ತಿವೆ.ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಹೃದಯ ಸಂಬಂಧಿ ಸಮಸ್ಯೆ ಹಾಗೂ ಹೃದಯಘಾತ ಪ್ರಕರಣಗಳು ಸಾಮಾನ್ಯವಾಗಿಬಿಟ್ಟಿವೆ.ಇತ್ತೀಚ್ಚಿಗೆ ವಿದೇಶ ಪ್ರವಾಸಕ್ಕೆಂದು ತೆರಳಿದ್ದ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನ ಅವರು ಕೂಡ ಹೃದಯಾಘಾತವಾಗಿ ಮೃತಪಟ್ಟಿದ್ದರು

