Share this news

ಮೂಡುಬಿದಿರೆ: ಮಂಗಳೂರಿನಲ್ಲಿ ಜರಗಿದ ಪ್ರೌಢಶಾಲಾ ವಿದ್ಯಾರ್ಥಿಗಳ 14ರ ಹರೆಯದ ಬಾಲಕರ ವಿಭಾಗದ ಈಜು ಸ್ಪರ್ಧೆಯಲ್ಲಿ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಕಲ್ಲಬೆಟ್ಟುವಿನ 8ನೇ ತರಗತಿಯ ವಿದ್ಯಾರ್ಥಿ ಸೋಹನ್ ಗಿರೀಶ್ ಪಾಟೀಲ್ 50 ಮೀ ಬ್ರೆಸ್ಟ್ ಸ್ಟೋಕ್ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ಸಂದರ್ಭದಲ್ಲಿ 100ಮೀ ಬ್ರೆಸ್ಟ್ ಸ್ಟೋಕ್ ವಿಭಾಗದಲ್ಲಿಸೋಹನ್  ತೃತೀಯ ಸ್ಥಾನ ಗಳಿಸಿದ್ದಾರೆ.

ಒಂದು ವಾರದ ಅಂತರದಲ್ಲಿ ಕ್ರೀಡಾ ವಿಭಾಗದಲ್ಲಿ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ಸಂಸ್ಥೆಯ ಗುಣಮಟ್ಟಕ್ಕೆ ಹಿಡಿದ ಕನ್ನಡಿಯಾಗಿದೆ, ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *